ಬೆಂಗಳೂರು: ರಾಜ್ಯದಲ್ಲಿ ಮತ್ತೆ ವರುಣ ಅಬ್ಬರಿಸಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಸೋಮವಾರದಿಂದ ಎಡೆಬಿಡದಂತೆ ಮಳೆ (Rain) ಸುರಿಯುತ್ತಿದೆ. ಇಂದು ಮತ್ತು ನಾಳೆ ಕೂಡ ಹಿಂಗಾರು ಮಳೆ ಅಬ್ಬರಿಸಲಿದ್ದು, ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.
ನಾಲ್ಕು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಮಂಗಳವಾರ ಹಾಗೂ ಬುಧವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯಿಂದ (Indian Meteorological Department) ಮಳೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಮತ್ತು ನಾಳೆ ಭಾರೀ ಗಾಳಿ ಸಹಿತ ಧಾರಾಕಾರ ಮಳೆ ಸಾಧ್ಯತೆ ಇದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅವಾಂತರ; ರಸ್ತೆಗಳು ಜಲಾವೃತ – ಧರೆಗುರುಳಿದ ಮರಗಳು
Advertisement
Advertisement
ಗುಡುಗಿನ ಜೊತೆಗೆ ಮೇಲ್ಮೈ ಗಾಳಿ ಬಲವಾಗಿ ಬೀಸುವ ಸಾಧ್ಯತೆ ಇದ್ದು, ಮರದ ಕೆಳಗೆ, ತಾತ್ಕಾಲಿಕ ಶೆಲ್ಟರ್ ಕೆಳಗೆ ನಿಲ್ಲದಿರಿ ಎಂದು ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿ ಜೊತೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯ ನಂತರ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಕೆಇಎ ಪರೀಕ್ಷೆ ಅಕ್ರಮ ಪ್ರಕರಣ – ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಕಾಂಪೌಂಡ್ ಹಾರಿ ಎಸ್ಕೇಪ್
Advertisement
ಸೋಮವಾರ ರಾಜಧಾನಿಯಲ್ಲಿ ಭಾರಿ ಮಳೆಯಾಗಿದೆ. ಹಿಂಗಾರು ಅಬ್ಬರಕ್ಕೆ ನಗರದ ಹಲವು ಪ್ರದೇಶಗಳು ಜಲಾವೃತವಾಗಿದೆ. ಸತತ ಮೂರ್ನಾಲ್ಕು ಗಂಟೆಗಳ ಕಾಲ ಎಡಬಿಡದೆ ಮಳೆ ಸುರಿದಿದೆ. ಭಾರಿ ಮಳೆಗೆ ಬೆಂಗಳೂರು ತತ್ತರಿಸಿದೆ. ಯಲಹಂಕದಲ್ಲಿ ಅತಿಹೆಚ್ಚು ಮಳೆಯಾಗಿದ್ದು, 14.7 ಸೆಂ.ಮೀ ಮಳೆ ದಾಖಲಾಗಿದೆ. ಇದನ್ನೂ ಓದಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಡಿ.ಬಿ.ಚಂದ್ರೇಗೌಡ ನಿಧನ
Advertisement
ಎಲ್ಲೆಲ್ಲಿ ಎಷ್ಟು ಮಳೆ ?
ಯಲಹಂಕ – 14.7 ಸೆಂ.ಮೀ
ಹಂಪಿನಗರ – 9.4 ಸೆಂ.ಮೀ
ನಾಗಪುರ (ವೆಸ್ಟ್ ಜೋನ್) – 8.95 ಸೆಂ.ಮೀ
ಜಕ್ಕೂರು – 8.65 ಸೆಂ.ಮೀ
ನಂದಿನಿ ಲೇಔಟ್ – 8.55 ಸೆಂ.ಮೀ
ವಿಶ್ವನಾಥ್ ನಾಗೇನಹಳ್ಳಿ (ಈಸ್ಡ್ ಜೋನ್) – 7.5 ಸೆಂ.ಮೀ
ರಾಜ್ ಮಹಲ್ ಗುಟ್ಟಳ್ಳಿ – 7.6 ಸೆಂ.ಮೀ
ಗಾಳಿ ಆಂಜನೇಯ ಟೆಂಪಲ್ – 7.5 ಸೆಂ.ಮೀ
ಕೊಟ್ಟಿಗೆಪಾಳ್ಯ – 7 ಸೆಂ.ಮೀ
ಕಮ್ಮನಹಳ್ಳಿ (ಈಸ್ಟ್ ಜೋನ್)- 6.95 ಸೆಂ.ಮೀ
ಮಾರುತಿ ಮಂದಿರ ವಾರ್ಡ್ – 6.8 ಸೆಂ.ಮೀ
ಪೀಣ್ಯ ಇಂಡಸ್ಟ್ರಿಯಲ್ ಏರಿಯಾ -6.75 ಸೆಂ.ಮೀ
ಅಗ್ರಹಾರ ದಾಸರಹಳ್ಳಿ – 6.7 ಸೆಂ.ಮೀ