ನವದೆಹಲಿ: ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟುಮಾಡಿದ ಬಳಿಕ ಎಡೆಬಿಡದೆ ಸುರಿಯುತ್ತಿರುವ ಮಳೆ (Rain) ದಕ್ಷಿಣ ಭಾರತಕ್ಕೆ ಶಿಫ್ಟ್ ಆಗಿದೆ. ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್ (Red Alert) ಅನ್ನು ಘೋಷಿಸಲಾಗಿದೆ.
ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ತೆಲಂಗಾಣದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳವಾರ ತೆಲಂಗಾಣದ ಮಹಬೂಬ್ನಗರ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಇಬ್ಬರು ಬಾಲಕಿಯರು ಕೊಚ್ಚಿಕೊಂಡು ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ರಾಜ್ಯದ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
Advertisement
Advertisement
ಹೈದರಾಬಾದ್ನಲ್ಲಿ ಟ್ರಾಫಿಕ್ ಜಾಮ್ ಅನ್ನು ತಡೆಗಟ್ಟುವ ಸಲುವಾಗಿ ಐಟಿ ಕಂಪನಿಗಳಿಗೆ ಉದ್ಯೋಗಿಗಳು ಹಂತ ಹಂತವಾಗಿ ಕೆಲಸದಿಂದ ಮರಳುವಂತೆ ಮಾಡಲು ಪೊಲೀಸರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕಳೆದ 24 ಗಂಟೆಯಲ್ಲಿ ಕೆಆರ್ಎಸ್ ಡ್ಯಾಂಗೆ ಹರಿದು ಬಂದ 4 ಟಿಎಂಸಿ ನೀರು – 104 ಅಡಿಗೆ ಏರಿಕೆ
Advertisement
Advertisement
ಕರ್ನಾಟಕದಲ್ಲಿ ಹವಾಮಾನ ಇಲಾಖೆಯು ಕರಾವಳಿ ಪ್ರದೇಶಗಳಲ್ಲಿನ ಜನರು ಜಲಾವೃತಕ್ಕೆ ಒಳಗಾಗುವ ಪ್ರದೇಶಗಳಿಂದ ದೂರ ಉಳಿಯುವಂತೆ ಕೇಳಿಕೊಂಡಿದೆ. ನಿರಂತರ ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಕಟ್ಟಡ ಹಾಗೂ ರಸ್ತೆಗಳಿಂದ ದೂರವಿರಲು ತಿಳಿಸಿದೆ. ಇದನ್ನೂ ಓದಿ: ಸರ್ಕಾರ ಮುಸ್ಲಿಂ ಓಲೈಕೆಗೆ ಸಂವಿಧಾನಬಾಹಿರವಾಗಿ ವರ್ತಿಸಿದ್ರೆ ಪರಿಣಾಮ ನೆಟ್ಟಗಿರಲ್ಲ: ಸುನೀಲ್ ಕುಮಾರ್
Web Stories