ಮಂಗಳೂರು: ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ.
ಚಿತ್ರದುರ್ಗದ ಮೂಲದ ರಚನಾ ಅತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಚನಾ ವ್ಯಾಸಂಗ ಮಾಡುತ್ತಿದ್ದಳು.
ಇಂದು ಮಧ್ಯಾಹ್ನ ಲೈಬ್ರೆರಿಗೆ ಬಂದಿದ್ದ ರಚನಾ ಅನಂತರ ಕಾಲೇಜಿನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಹೊಂದಿದ್ದ ಕಾರಣ ರಚನಾಗೆ ಈ ಹಿಂದೆ ಕೌನ್ಸಿಲಿಂಗ್ ನೀಡಲಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಕುರಿತು ರಚನಾ ಡೆತ್ ನೋಟ್ ಸಹ ಬರೆದಿಟ್ಟಿದ್ದು, ತನ್ನ ಆತ್ಮಹತ್ಯೆಗೆ ಕಡಿಮೆ ಅಂಕ ಪಡೆದಿರುವುದು ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾಳೆ ಎಂದು ಪೊಲೀಸರು ಪ್ರಾಥಮಿಕ ಮಾಹಿತಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆರ್‍ಟಿಐ ಕಾಯ್ದೆಯಡಿ ಬಯಲಾಯ್ತು ಆಳ್ವಾಸ್ ಸಂಸ್ಥೆಯ ಸ್ಫೋಟಕ ರಹಸ್ಯ
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಪ್ರಸ್ತುತ ಮೃತ ದೇಹವನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ರವಾನಿಸಲಾಗಿದೆ. ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.