ಮಂಗಳೂರು: ಜೈನ ಕಾಶಿ ಮೂಡಬಿದ್ರೆಯಲ್ಲಿ (Moodabidri) ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 2024 ಕ್ಕೆ (Alvas Virasat 2024) ಚಾಲನೆ ದೊರೆತಿದೆ.
ಮೂಡಬಿದ್ರೆಯ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಐದು ದಿನಗಳ ವರೆಗೆ ನಡೆಯುವ 30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಚಾಲನೆ ನೀಡಿದರು. ಇದನ್ನೂ ಓದಿ: ಲೋಕಸಭೆಯಲ್ಲಿ ರೈಲ್ವೇ ತಿದ್ದುಪಡಿ ಮಸೂದೆ 2024 ಅಂಗೀಕಾರ
Advertisement
Advertisement
ಭವ್ಯ ಸಾಂಸ್ಕೃತಿಕ ಮೆರವಣಿಗೆ ಕಾರ್ಯಕ್ರಮಕ್ಕೆ ಮೆರುಗು ನೀಡಿತು. ಇಕ್ಕೆಲೆಗಳಲ್ಲಿ ರಥದ ಸ್ವರೂಪ, ಯಕ್ಷ ಕಿರೀಟ, ಮುಖವಾಡ, ನವಿಲು, ಗಣಪ, ಬೃಹತ್ ಕಾಲುದೀಪಗಳಿಂದ ಶೋಭಾಯಮಾನವಾದ ಸಭಾಂಗಣದಲ್ಲಿ 150 ಕ್ಕೂ ಅಧಿಕ ದೇಶೀಯ ಜಾನಪದ ಕಲಾ ತಂಡಗಳಿAದ 4,000 ಸಾವಿರಕ್ಕೂ ಮಿಕ್ಕಿದ ಕಲಾವಿದರನ್ನು ಒಳಗೊಂಡ ಭವ್ಯ ಸಾಂಸ್ಕೃತಿಕ ಮೆರವಣಿಗೆ ಗಮನ ಸೆಳೆಯಿತು.
Advertisement
Advertisement
ಹರಿದ್ವಾರದಿಂದ ಬಂದ ವಿಪುಲ್ ಶರ್ಮಾ ನೇತೃತ್ವದ ಗಂಗಾರತಿ ಈ ಬಾರಿಯ ವಿರಾಸತ್‌ನ ವಿಶೇಷತೆ. ಐದು ದಿನಗಳ ಕಾಲ ನಡೆಯುವ ಈ ಸಾಂಸ್ಕೃತಿಕ ಉತ್ಸವದಲ್ಲಿ ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ ಆಯೋಜಿಸಲಾಗಿದ್ದು, ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದೆ. ಇದನ್ನೂ ಓದಿ: ಸಂಸ್ಕಾರವಂತ ಮನುಷ್ಯ ಹೇಗಿರಬೇಕು ಎಂಬುದಕ್ಕೆ ಎಸ್‌ಎಂಕೆ ಮಾದರಿ: ಮಾಧುಸ್ವಾಮಿ