ವಾತಾವರಣ ಬದಲಾಗುತ್ತಿದೆ. ಬಿಸಿಲ ಬೆಗೆ ಹೆಚ್ಚಾಗುತ್ತಿದ್ದು, ಬಾಯಾರಿಕೆಗೆ ಅಂಗಡಿಗಳಲ್ಲಿ ಸಿಗುವ ತಂಪು ಪಾನಿಯಗಳ ಮೊರೆ ಹೋಗುವುದು ಸಹಜ. ಆದರೆ ಇಂದು ನೀವು ಮನೆಯಲ್ಲಿಯೇ ರುಚಿಯಾದ ಹೆಸರುಬೇಳೆ ಪಾನಕ ತಯಾರಿಸಿ ಸವಿಯಿರಿ. ಇದು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ. ಮೈ ತುರಿಕೆ, ಪಿತ್ತಕ್ಕೆ ಒಳ್ಳೆಯ ಪಾನಕವಾಗಿದೆ.
Advertisement
ಬೇಕಾಗುವ ಸಾಮಗ್ರಿಗಳು:
* ಹೆಸರುಬೇಳೆ- ಅರ್ಧ ಕಪ್
* ಬೆಲ್ಲ – ಅರ್ಧ ಕಪ್
* ತೆಂಗಿನಕಾಯಿ ತುರಿ – ಅರ್ಧ ಕಪ್
* ಏಲಕ್ಕಿ – 2
* ನಿಂಬೆರಸ- ಸ್ವಲ್ಪ
Advertisement
ಮಾಡುವ ವಿಧಾನ:
* ಹೆಸರುಬೇಳೆಯನ್ನು ಒಂದು ಗಂಟೆ ನೀರಿನಲ್ಲಿ ನೆನೆಸಿಟ್ಟಿರಬೇಕು. ಇದನ್ನೂ ಓದಿ: ಮನೆಮಂದಿಗೆ ಇಷ್ಟವಾಗುವ ಫಿಶ್ ಫ್ರೈ ಮಾಡುವ ಸುಲಭ ವಿಧಾನ
* ಹೆಸರುಬೇಳೆ, ಬೆಲ್ಲ, ತೆಂಗಿನಕಾಯಿ ತುರಿ, ಏಲಕ್ಕಿ ಬೀಜ ಮತ್ತು ಸ್ವಲ್ಪ ನೀರು ಹಾಕಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿಕೊಳ್ಳಬೇಕು.
Advertisement
Advertisement
* ರುಬ್ಬಿಕೊಂಡ ಮಿಶ್ರಣವನ್ನು ಸೋಸಿ ಕೊಳ್ಳಿ. ನಂತರ ನೀರು, ನಿಂಬೆರಸ ಹಾಕಿ ಮಿಶ್ರಣ ಮಾಡಿದರೆ ರುಚಿಯಾದ ಪಾನಕ ಸವಿಯಲು ಸಿದ್ಧವಾಗುತ್ತದೆ. ಇದನ್ನೂ ಓದಿ: ಸ್ಪೆಷಲ್ ಪೈನಾಪಲ್ ಪಾಯಸ ಮಾಡಿ ಹಬ್ಬವನ್ನು ಸಂಭ್ರಮಿಸಿ