ಮಂಗಳೂರು: ನಗರದ ಸುರತ್ಕಲ್ ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರ್ಯಾರದೋ ಮಕ್ಕಳಿಗೆ ಹೊಡೆಯಲು ಈ ಲೋಫರ್ ಗಳು ಯಾರು ಎಂದು ಪ್ರಶ್ನಿಸಿ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ.
Advertisement
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ನೀಡಿರುವ ಹಿಂದೆ ಯಾರಿದ್ದಾರೆ? ಕಾನೂನು ಕ್ರಮ ತೆಗೆದುಕೊಳ್ಳಲು ಪ್ರತಿಭಟನೆ ನಡೆಸಬೇಕೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನೈತಿಕ ಪೊಲೀಸ್ ಗಿರಿ ವರದಿ ಬೆನ್ನಲ್ಲೇ ಐವರ ಬಂಧನ, ಬಿಡುಗಡೆ
Advertisement
Advertisement
ಮಂಗಳೂರಲ್ಲಿ ಇಂತಹ ಘಟನೆಗಳು ನಡೆಯಲೇಬಾರದಿತ್ತು. ಆದರೆ ಇಂತಹ ಘಟನೆಯನ್ನು ತಡೆಯಲು ಪೊಲೀಸ್ ಇಲಾಖೆ ವಿಫಲವಾಗಿದೆ. ಇಂತಹ ಕೃತ್ಯಗಳನ್ನು ತಡೆಯಲು ಅಥವಾ ಆರೋಪಿಗಳಿಗೆ ಕಠಿಣ ಕ್ರಮ ತೆಗೆದುಕೊಳ್ಳಲು ರಾಜ್ಯದಲ್ಲಿ ಹೊಸ ವ್ಯವಸ್ಥೆ ತರಲಿ. ಯಾರಾರದ್ದೋ ಮಕ್ಕಳಿಗೆ ಹೊಡೆಯಲು ಇವರು ಯಾರು ಎಂದು ಕಿಡಿಕಾರಿದರು. ಇದನ್ನೂ ಓದಿ: ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಓರ್ವ ನಟ, ಸವಿ ಪಿಎ ವಿರುದ್ಧ ತಂದೆ ದೂರು
Advertisement