ಬೆಂಗಳೂರು: ಸ್ಪಾ ಮತ್ತು ಸಲೂನ್ಗಳಲ್ಲಿ (Spa & Salon) ನೈತಿಕ ಪೊಲೀಸ್ಗಿರಿ (Moral Policing) ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ನಾಲ್ವರು ಮಹಿಳೆಯರು ಸೇರಿ ಆರು ಜನರನ್ನು ಬಂಧಿಸಲಾಗಿದೆ.
ಲಕ್ಷ್ಮಿ, ಮಮತಾ, ಪ್ರಿಯಾ, ಸಗಾಯ್ ಮೇರಿ, ಯೋಗಬಾಲು ಮತ್ತು ಆಸೀಫ್ ಬಂಧಿತರು.

ಇಲ್ಲಿನ ಸ್ಪಾ ಮತ್ತು ಸಲೂನ್ಗಳಿಗೆ ತೆರಳುತ್ತಿದ್ದ ಆರೋಪಿಗಳು, ಮಾಧ್ಯಮಗಳು ಮತ್ತು ಸಂಘಟನೆಗಳ ಹೆಸರನ್ನು ಬಳಸಿಕೊಂಡು ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸುತ್ತಿದ್ದರು. ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನ ವೈರಲ್ ಮಾಡುವುದಾಗಿ ಬೆದರಿಸುತ್ತಿದ್ದರು.
ಐದು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಆರೋಪದಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರು ಜನರನ್ನು ಬಂಧಿಸಿ ಕಾರು, ಬೈಕ್, ನಗದು ಹಾಗೂ ಕೆಲವು ನಕಲಿ ಐಡಿ ಕಾರ್ಡ್ಗಳನ್ನು ವಶಕ್ಕೆ ಪಡೆದಿದ್ದಾರೆ.
