ಮಂಗಳೂರು: ಮಂಗಳೂರಿನ (Mangaluru) ಸೋಮೇಶ್ವರ ಬೀಚ್‍ನಲ್ಲಿ (Someshwar Beach) ನಡೆದಿದ್ದ ನೈತಿಕ ಪೊಲೀಸ್‍ಗಿರಿ (Moral Policing) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ಕೇರಳ (Kerala) ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳು (Students) ಬೀಚ್‍ಗೆ ತೆರಳಿದ್ದರು. ಯುವತಿಯರೊಂದಿಗೆ ಬಂದಿದ್ದ ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಅವರನ್ನು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ನೈತಿಕ ಪೊಲೀಸ್‍ಗಿರಿ ನಡೆದಿರುವುದಾಗಿ ತಿಳಿದುಬಂದಿದೆ. ಕೇರಳ ಮೂಲದ ಕಣ್ಣೂರು ಹಾಗೂ ಕಾಸರಗೋಡಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಇದನ್ನೂ ಓದಿ: 1948ರಲ್ಲಿ ಪಾಕಿಸ್ತಾನಿ ಮೂಲಭೂತವಾದಿಗಳಿಂದ ಹಾನಿಗೊಳಗಾಗಿದ್ದ ಶಾರದಾ ಮಂದಿರ ಪುನರ್ ನಿರ್ಮಾಣ – ಶೃಂಗೇರಿ ಶ್ರೀ ಭೇಟಿ
ಹಲ್ಲೆಯ ವೇಳೆ ವಿದ್ಯಾರ್ಥಿಗಳಾದ ಜಾಫರ್ ಶರೀಫ್, ಮುಜೀಬ್, ಆಶಿಕ್‍ಗೆ ಗಾಯಗಳಾಗಿವೆ. ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅವರೊಂದಿಗಿದ್ದ ವಿದ್ಯಾರ್ಥಿನಿಯರು ವಾಪಸ್ ತಮ್ಮ ಊರಿಗೆ ತೆರಳಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಮಂಗಳೂರಿನ ಬೀಚ್‌ನಲ್ಲಿ ನೈತಿಕ ಪೊಲೀಸ್‌ಗಿರಿ – ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ಹಲ್ಲೆ