ಮಂಗಳೂರು: ನಗರದ ಹೊರವಲಯದ ಸೋಮೇಶ್ವರ ಬೀಚ್‌ನಲ್ಲಿ (Someshwar Beach) ನೈತಿಕ ಪೊಲೀಸ್‌ಗಿರಿ (Moral Policing) ನಡೆದಿದೆ. ಕೇರಳ ಮೂಲದ ವಿದ್ಯಾರ್ಥಿಗಳ (Kerala Students) ಮೇಲೆ ಹಲ್ಲೆ ನಡೆಸಲಾಗಿದೆ.
ನಗರದ ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ಕೇರಳ ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಕೇರಳದ ಕಣ್ಣೂರಿನ ಯುವಕರು ಹಾಗೂ ಕಾಸರಗೋಡಿನ ಯುವತಿಯರ ಮೇಲೆ ಹಲ್ಲೆ ನಡೆಸಲಾಗಿದೆ.
ವಿದ್ಯಾರ್ಥಿಗಳು ಸಮುದ್ರ ತೀರಕ್ಕೆ ಹೋಗಿದ್ದ ಸಂದರ್ಭ ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಅವರನ್ನು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ನೈತಿಕ ಪೊಲೀಸ್‌ಗಿರಿ ನಡೆದಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ಅತ್ಯಾಚಾರವಾದರೆ ದೇಶದ ಮೇಲೆ ಅತ್ಯಾಚಾರವಾದಂತೆ: ನಟ ಕಿಶೋರ್
ಹಲ್ಲೆಯ ವೇಳೆ ಜಾಫರ್ ಶರೀಫ್, ಮುಜೀಬ್ , ಆಶಿಕ್‌ಗೆ ಗಾಯಗಳಾಗಿವೆ. ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅವರೊಂದಿಗಿದ್ದ ವಿದ್ಯಾರ್ಥಿನಿಯರು ವಾಪಸ್ ತಮ್ಮ ಊರಿಗೆ ತೆರಳಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ಪಡೆದಿರುವ ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಲ್ಲೆ ನಡೆಸಿದ ಯುವಕರ ತಂಡದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಇದನ್ನೂ ಓದಿ: ಐದರ ಪೈಕಿ 3 ಗ್ಯಾರಂಟಿ ಆರಂಭದಲ್ಲಿ ಜಾರಿ – ಷರತ್ತುಗಳು ಏನಿರಬಹುದು?