ಹಾವೇರಿಯ ಬ್ಯಾಡಗಿ ಪಟ್ಟಣದಲ್ಲಿ ನೈತಿಕ ಪೊಲೀಸ್‌ ಗಿರಿ – 7 ಮಂದಿ ಮುಸ್ಲಿಂ ಯುವಕರು ಅರೆಸ್ಟ್‌

Public TV
1 Min Read
Haveri 1

– ಹಿಂದೂ ವ್ಯಕ್ತಿಯೊಂದಿಗೆ ಬೈಕ್‌ನಲ್ಲಿ ಬಂದಿದ್ದಕ್ಕೆ ಮುಸ್ಲಿಂ ಯುವತಿ ಮೇಲೆ ಹಲ್ಲೆ

ಹಾವೇರಿ: ಹಾನಗಲ್ ನೈತಿಕ ಪೊಲೀಸ್ ಗಿರಿ (Moral Policing) ಹಾಗೂ ಗ್ಯಾಂಗ್ ರೇಪ್ ಪ್ರಕರಣ ಮುನ್ನೆಲೆಯಲ್ಲಿರುವಾಗಲೇ ಬ್ಯಾಡಗಿ ಪಟ್ಟಣದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ‌.

ಹಿಂದೂ ವ್ಯಕ್ತಿಯೊಬ್ಬನ ಜೊತೆ ಕಾಣಿಸಿಕೊಂಡಿದ್ದರು ಎಂಬ ಕಾರಣಕ್ಕೆ ಮುಸ್ಲಿಂ ಯುವತಿಯ (Muslim Women) ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದೆ. ಹಲ್ಲೆಗೊಳಗಾದ ಮುಸ್ಲಿಂ ಯುವತಿ ಬ್ಯಾಡಗಿ ತಾಲೂಕು ಅಗಸನಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಹೊರಟಿದ್ದರು. ತಮ್ಮ ಜೊತೆ ಕೆಲಸ ಮಾಡ್ತಿದ್ದ ಜಗದೀಶ್ ಎಂಬ ವ್ಯಕ್ತಿ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ರಾಮಮಂದಿರದ ಮಂಡಲೋತ್ಸವ ಪೂಜೆಗೆ ರಾಯಚೂರಿನ ವೈದಿಕರಿಬ್ಬರು ಆಯ್ಕೆ

Haveri 2

ಬ್ಯಾಡಗಿ ಪಟ್ಟಣದ ಪುರಸಭೆಯ ಬಳಿಯ ಶಿವನ ದೇವಸ್ಥಾನದ ಬಳಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ. ನೀನು ಯಾಕೆ ಇವನ ಜೊತೆ ಬೈಕ್ ನಲ್ಲಿ ಬಂದೆ? ಎಂದು ಪ್ರಶ್ನಿಸಿ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ‌. ಯುವತಿಯನ್ನ ಎಳೆದಾಡಿ ಕಪಾಳಕ್ಕೆ ಹೊಡೆದು ಸಾರ್ವಜನಿಕ ಸ್ಥಳದಲ್ಲಿ ಅವಮಾನ ಮಾಡಿದ್ದಾರೆ. ಜೀವ ಬೆದರಿಕೆಯನ್ನೂ ಹಾಕಿದ್ದಾರೆಂದು ಆಕೆ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿಗಳೇ ಹೀಗೆಲ್ಲ ಆಗ್ತಿರುತ್ತೆ- ಸಿಎಂಗೆ ಟಾಂಗ್‌ ಕೊಟ್ಟ ಮೋದಿ ವೀಡಿಯೋ ವೈರಲ್‌

ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ, 7 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನ ಅಬ್ದುಲ್ ಖಾದರ್ ಮುದಗಲ್, ಮನ್ಸೂರ್ ತಾಂಡೂರು, ಮೆಹಬೂಬಖಾನ್ ಬಡಿಗೇರ, ರೀಯಾಜ್,ಅಲ್ಪಾಜ್ ಬಳಿಗಾರ, ಅಬ್ದುಲ್ ದೇಸೂರ, ಖಾದರ್ ಕಣಕೆ, ಸಲೀಂ ಸಾಬ್ ಖಾಜಿ, ಮಹಬೂಬ್ ಅಲಿ ಹಲಗೇರಿ ಆರೋಪಿಗಳು ಎಂದು ಗುರುತಿಸಲಾಗಿದೆ. ಡಿವೈಎಸ್ಪಿ ಪಾಟೀಲ ನೇತೃತ್ವದಲ್ಲಿ ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ಬಾಲರಾಮನ ಪ್ರಾಣಪ್ರತಿಷ್ಠಾಪನಾ ಸಮಾರಂಭಕ್ಕೆ ಕ್ರಿಕೆಟಿಗ ಆರ್.ಅಶ್ವಿನ್‍ಗೆ ಆಹ್ವಾನ 

Share This Article