ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣವೊಂದು ನಡೆದಿರುವುದು ಬೆಳಕಿಗೆ ಬಂದಿದೆ.
ಬಸ್ಸಿನಲ್ಲಿ ಯುವತಿಯ ಜೊತೆ ಮಾತನಾಡಿದ್ದಕ್ಕೆ ಅನ್ಯಕೋಮಿನ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಜಿರೆ(Ujire) ಯಲ್ಲಿ ಈ ಘಟನೆ ನಡೆದಿದ್ದು, ಕಕ್ಕಿಂಜೆ ನಿವಾಸಿ ಝಾಹಿರ್ (22) ಹಲ್ಲೆಗೊಳಗಾದ ಯುವಕನಾಗಿದ್ದಾನೆ.
Advertisement
Advertisement
ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಝಾಹಿರ್, ಮಂಗಳವಾರ ಊರಿಗೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದನು. ಯುವತಿ ಬೆಳ್ತಂಗಡಿಯಲ್ಲಿ ಬಸ್‍ನಿಂದು ಇಳಿದು ಹೋಗಿದ್ದಾಳೆ.
Advertisement
ಇತ್ತ ಯುವಕರ ತಂಡ ಝಾಹಿರ್‍ಗಾಗಿ ಉಜಿರೆಯಲ್ಲಿ ಕಾದು ಕುಳಿತು ಹಲ್ಲೆ ನಡೆಸಿದೆ. ಉಜಿರೆಯಲ್ಲಿ ಬಸ್ ನಿಂದ ಕಳಗಿಳಿಸಿ ಝಾಹಿರ್ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಇದನ್ನೂ ಓದಿ: ಖಾನಾಪುರದಲ್ಲಿ ಪೊಲೀಸರ ದಾಳಿ- ದಾಖಲೆ ಇಲ್ಲದ 53 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ
Advertisement
ಘಟನೆ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.