ರಾಯಚೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಾಸ್ಟೆಲ್‍ನಲ್ಲಿ ಕಳಪೆ ಗುಣಮಟ್ಟದ ಆಹಾರವನ್ನು ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಯಚೂರಿನ ಲಿಂಗಸಗೂರಿನಲ್ಲಿ ಇಂದು ನಡೆದಿದೆ.
ಕಳಪೆ ಗುಣಮಟ್ಟದ ಆಹಾರವನ್ನು ಸೇವಿಸಿ ಸುಮಾರು 12 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಮಧ್ಯಾಹ್ನದ ಊಟ ಬಳಿಕ ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥರಾಗಿದ್ದಾರೆ. ತಕ್ಷಣ ಹಾಸ್ಟೆಲ್ ವಾರ್ಡನ್ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
Advertisement
ಪದೇ ಪದೇ ಮೊರಾರ್ಜಿ ಶಾಲೆಗಳಲ್ಲಿ ಈ ರೀತಿ ಘಟನೆಗಳು ಮರುಕಳಿಸುತ್ತಿದ್ದರೂ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಈ ಕುರಿತು ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ದಿವ್ಯ ನಿರ್ಲಕ್ಷ್ಯಕ್ಕೆ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದೆ. ರಾಜ್ಯದಲ್ಲಿ ಹಲವೆಡೆ ಕಳಪೆ ಗುಣಮಟ್ಟದ ಆಹಾರ ಸೇವಿಸಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾದರೂ ಕ್ರಮ ತೆಗೆದುಕೊಳ್ಳದ ಅಧಿಕಾರಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv