ಗಾಂಧಿನಗರ: ಕಳೆದ ವರ್ಷ ಬರೋಬ್ಬರಿ 135 ಜನರ ಸಾವಿಗೆ ಕಾರಣವಾದ ಗುಜರಾತ್ನ (Gujarat) ಮೋರ್ಬಿಯಲ್ಲಿನ ಸೇತುವೆ ದುರಂತದ (Morbi Bridge Tragedy) ಕೆಲವು ನಿಜ ಅಂಶಗಳು ತನಿಖಾ ವರದಿಯಲ್ಲಿ ಬಯಲಾಗಿದೆ. ತೂಗು ಸೇತುವೆಯ ಕೆಲವು ತಂತಿಗಳು ಮೊದಲೇ ಮುರಿದಿದ್ದು, ಹಲವು ತುಕ್ಕು ಹಿಡಿದಿದ್ದವು ಎಂದು ತನಿಖೆಯ ವರದಿ ತಿಳಿಸಿದೆ.
ಮೋರ್ಬಿ ಸೇತುವೆ ದುರಂತದ ತನಿಖೆಯನ್ನು ಗುಜರಾತ್ ಸರ್ಕಾರ ವಿಶೇಷ ತನಿಖಾ ತಂಡಕ್ಕೆ (SIT) ವಹಿಸಿತ್ತು. ಇದೀಗ ಎಸ್ಐಟಿ ಸೇತುವೆ ದುರಸ್ತಿ, ನಿರ್ವಹಣೆ ಹಾಗೂ ಕಾರ್ಯಾಚರಣೆಯಲ್ಲಿ ಹಲವು ಲೋಪಗಳನ್ನು ಪತ್ತೆ ಮಾಡಿದೆ.
Advertisement
Advertisement
ಮಚ್ಚು ನದಿಯ ಮೇಲೆ 1887ರಲ್ಲಿ ಆಗಿನ ಆಡಳಿತಗಾರರು ನಿರ್ಮಿಸಿದ್ದ ಸೇತುವೆಯ 2 ಮುಖ್ಯ ಕೇಬಲ್ಗಳಲ್ಲಿ ಒಂದು ಕೇಬಲ್ನಲ್ಲಿ ತುಕ್ಕಿನ ಸಮಸ್ಯೆಯಿತ್ತು. ಅದರ ಅರ್ಧದಷ್ಟು ತಂತಿಗಳಿಗೆ ತುಕ್ಕು ಹಿಡಿದಿತ್ತು. ಇದು ಕಳೆದ ವರ್ಷ ಅಕ್ಟೋಬರ್ 30 ರಂದು ದುರಂತ ಸಂಭವಿಸಲು ಕಾರಣವಾಗಿರುವ ಸಾಧ್ಯತೆಯಿದೆ. ನದಿಯ ಮೇಲ್ಭಾಗದ ಮುಖ್ಯ ಕೇಬಲ್ ತುಂಡಾಗಿರುವುದೂ ದುರಂತಕ್ಕೆ ಕಾರಣ ಎಂದು ಎಸ್ಐಟಿ ತಿಳಿಸಿದೆ. ಇದನ್ನೂ ಓದಿ: ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ
Advertisement
ಸೇತುವೆಯ ಪ್ರತಿಯೊಂದು ಕೇಬಲ್ ಅನ್ನು 7 ಎಳೆಗಳಿಂದ ರಚಿಸಲಾಗಿದ್ದು, ಅವು ಉಕ್ಕಿನ ತಂತಿಗಳಾಗಿವೆ. ಈ ಕೇಬಲ್ ಅನ್ನು ರೂಪಿಸಲು ಒಟ್ಟು 49 ತಂತಿಗಳನ್ನು 7 ಎಳೆಗಳಲ್ಲಿ ಒಟ್ಟಿಗೆ ಜೋಡಿಸಲಾಗಿದೆ. 49 ತಂತಿಗಳಲ್ಲಿ 22 ತುಕ್ಕು ಹಿಡಿದಿರುವುದು ಗಮನಿಸಲಾಗಿದೆ. ಇದು ಘಟನೆಗೂ ಮೊದಲೇ ಮುರಿದು ಹೋಗಿರುವುದನ್ನು ಸೂಚಿಸುತ್ತದೆ ಎಂದು ವರದಿಯಲ್ಲಿ ತಿಳಿಸಿದೆ.
Advertisement
ಇನ್ನು ಸೇತುವೆ ನವೀಕರಣದ ಸಮಯದಲ್ಲಿ ಹಳೆಯ ಸಸ್ಪೆಂಡರ್ಗಳನ್ನು (ಕೇಬಲ್ಗಳನ್ನು ಸಂಪರ್ಕಿಸುವ ಸ್ಟೀಲ್ ರಾಡ್ಗಳು) ಹೊಸ ಸಸ್ಪೆಂಡರ್ಗಳೊಂದಿಗೆ ಬೆಸುಗೆ ಹಾಕಲಾಗಿದೆ ಎಂಬುದನ್ನು ಎಸ್ಐಟಿ ಕಂಡುಹಿಡಿದಿದೆ. ಆದ್ದರಿಂದ ಸಸ್ಪೆಂಡರ್ಗಳ ನಡವಳಿಕೆ ಬದಲಾಗಿದ್ದು, ದುರಂತ ಸಂಭವಿಸಲು ಕಾರಣವಾಗಿದೆ ಎಂದು ಉಲ್ಲೇಖಿಸಿದೆ.
ದುರಂತ ಸಂಭವಿಸುವ ಸಂದರ್ಭ ಸೇತುವೆ ಮೇಲೆ 300 ಜನರಿದ್ದರು. ಇದು ಸೇತುವೆ ಭಾರವನ್ನು ಹೊರುವ ಸಾಮರ್ಥ್ಯಕ್ಕಿಂತಲೂ ಹೆಚ್ಚಾಗಿದೆ. ಆದರೂ ಸೇತುವೆಯ ನೈಜ ನಾಮರ್ಥ್ಯವನ್ನು ಪ್ರಯೋಗಾಲಯದ ವರದಿಗಳಿಂದ ದೃಢೀಕರಿಸಲಾಗುವುದು ಎಂದು ತಿಳಿಸಲಾಗಿದೆ. ಇದನ್ನೂ ಓದಿ: 9 ಪ್ರಶ್ನೆಗಳಿಗೆ ಉತ್ತರ ಕೊಡಿ: ರೂಪಾಗೆ ರೋಹಿಣಿ ಅಭಿಮಾನಿಗಳ ಪ್ರಶ್ನೆ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k