ಬೆಂಗಳೂರು: ಕಾಂಗ್ರೆಸ್ನ 5 ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ಗೃಹಲಕ್ಷ್ಮಿ ಯೋಜನೆಗೆ (Gruha Lakshmi Scheme) ಇಲ್ಲಿಯವರೆಗೆ 1 ಕೋಟಿಗೂ ಅಧಿಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಇದುವರೆಗೂ ಸುಮಾರು 1.08 ಕೋಟಿ ಅರ್ಜಿ ಸಲ್ಲಿಕೆಯಾಗಿದೆ.
ಚುನಾವಣೆ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 3 ತಿಂಗಳಾಗಿದ್ದರೂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಇನ್ನೂ ದಿನ ಹುಡುಕುತ್ತಿದೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ಕೆಆರ್ಎಸ್ನಿಂದ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು
Advertisement
Advertisement
ಆಗಸ್ಟ್ 15ಕ್ಕೆ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ ಎನ್ನಲಾಗಿತ್ತು. ಆದರೆ ಬಳಿಕ ಈ ತಿಂಗಳ ಕೊನೆಯಲ್ಲಿ ಯೋಜನೆ ಜಾರಿಗೆ ಸರ್ಕಾರ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್ನ ಅತ್ಯಂತ ನಿರೀಕ್ಷಿತ ಯೋಜನೆಗೆ ಇದುವರೆಗೂ 1,08,47,486 ಅರ್ಜಿ ಸಲ್ಲಿಕೆಯಾಗಿದೆ. ಇದನ್ನೂ ಓದಿ: ಸಚಿವ ಸಂಪುಟದ ದೋಸ್ತಿಗಳ ನಡುವೆ ಮಹಾ ಬಿರುಕಿದೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಶಾಸಕ
Advertisement
Web Stories