– ತಿಮಿಂಗಲ ವಾಂತಿಗೆ ಯಾಕಿಷ್ಟು ಬೇಡಿಕೆ? – ಇದರಿಂದ ಪ್ರಯೋಜನ ಏನು?
ಬೀದರ್: ಕಾಳಸಂತೆಯಲ್ಲಿ ತಿಮಿಂಗಲ ವಾಂತಿ (Ambergris) ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್‌ಗೆ ಹೆಡೆಮುರಿ ಕಟ್ಟಿರುವ ಪೊಲೀಸರು ಸುಮಾರು 1 ಕೋಟಿ ರೂ. ಮೌಲ್ಯದ 980 ಗ್ರಾಂ ನಷ್ಟು ಅಂಬರ್‌ಗ್ರಿಸ್ ವಶಪಡಿಸಿಕೊಂಡಿದ್ದಾರೆ.
ಭರ್ಜರಿ ಕಾರ್ಯಾಚರಣೆ ಮಾಡಿದ ಬೀದರ್ ಪೊಲೀಸರು (Bidar Police) ಸೌಂದರ್ಯ ವರ್ಧಕ ಹಾಗೂ ಸುಗಂಧ ದ್ರವ್ಯ ತಯಾರಿಸಲು ಬಳಕೆ ಮಾಡುತ್ತಾರೆ. ಹಾಗಾಗಿ ತಿಮಿಂಗಲ ವಾಂತಿಯನ್ನು ಗೋವಾದಿಂದ ಅಕ್ರಮವಾಗಿ ಬೀದರ್‌ಗೆ ತಂದಿದ್ದ ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯ ಮೂವರು ಆರೋಪಿಗಳನ್ನು ಅರೆಸ್ಟ್ ಬಂಧಿಸಿ ಜೈಲಿಗಟ್ಟಿದ್ದಾರೆ.
Advertisement
Advertisement
15 ದಿನಗಳಲ್ಲಿ 28 ಕೇಸ್:
ಕಳೆದ 15 ದಿನಗಳಲ್ಲಿ 28 ಕಳ್ಳತನ ಪ್ರಕರಣ ಭೇದಿಸಿದ್ದಾರೆ. ಜಿಲ್ಲೆಯ 13 ಠಾಣೆಗಳಲ್ಲಿ ದಾಖಲಾಗಿದ್ದ ಜಾನುವಾರು ಮತ್ತು ವಿವಿಧ ಸ್ವತ್ತಿನ 28 ಪ್ರಕರಣಗಳನ್ನು ಭೇದಿಸಿ ಅಂತಾರಾಜ್ಯ ಕಳ್ಳರು ಸೇರಿ 28 ಆರೋಪಿಗಳನ್ನ ಬಂಧಿಸಿದ್ದಾರೆ.
Advertisement
ಒಟ್ಟಾರೆಯಾಗಿ ಬಂಧಿತ ಆರೋಪಿಗಳಿಂದ 53 ಲಕ್ಷ ರೂ. ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಲಾಗಿದೆ. ಅದರಲ್ಲಿ 7.76 ಲಕ್ಷ ನಗದು, 23.91 ಲಕ್ಷ ಮೌಲ್ಯದ 396 ಗ್ರಾಂ ಚಿನ್ನ, 320 ಗ್ರಾಂ ಬೆಳ್ಳಿ, 7 ಜಾನುವಾರು, 6 ಪಂಪ್ ಸೆಟ್, 7 ವಾಹನಗಳು, 16 ಸಾವಿರ ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ. ಬೀದರ್ ಪೊಲೀಸರ ಕಾರ್ಯಾಚರಣೆಗೆ ಎಸ್ಪಿ ಚನ್ನಬಸವಣ್ಣ ಲಂಗೋಟಿ ಶ್ಲಾಘಿಸಿದ್ದಾರೆ.
Advertisement
ತಿಮಿಂಗಲ ವಾಂತಿಗೆ ಯಾಕಿಷ್ಟು ಬೇಡಿಕೆ?
ಅಂಬರ್ ಗ್ರೀಸ್ ಎಂಬ ವಸ್ತುವು ಮೇಣದಂಥ ವಸ್ತುವಾಗಿದ್ದು, ಇದನ್ನ ಸುಗಂಧ ದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳ ತಯಾರಿಕೆಯಲ್ಲೂ ಇದನ್ನ ಬಳಸಲಾಗುತ್ತದೆ.
ತಿಮಿಂಗಿಲ ವಾಂತಿ ಸಿಗುವುದು ಬಹಳ ಅಪರೂಪ. ಏಕೆಂದರೆ, ತಿಮಿಂಗಿಲಗಳು ಸಮುದ್ರದಲ್ಲಿ ವಾಂತಿ ಮಾಡಿಕೊಳ್ಳುವುದು ಅಪರೂಪ. ಆದ್ದರಿಂದ ಇವು ಜನಸಾಮಾನ್ಯರಿಗೆ ಸಿಗುವುದು ತುಂಬಾ ವಿರಳ. ಹಾಗಾಗಿ ಈ ವಸ್ತುವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಆದರೆ ಕಳ್ಳಸಾಗಣೆದಾರರು ಅಂಬರ್‌ಗ್ರೀಸ್‌ಗಾಗಿ ಸಮುದ್ರಗಳಿಗೆ ದಾಂಗುಡಿ ಇಡುವುದನ್ನು ತಪ್ಪಿಸಲು ಬಹುತೇಕ ದೇಶಗಳು ಇದರ ಮಾರಾಟ ನಿಷೇಧಿಸಿವೆ. ಹಾಗಾಗಿ ಇದು ಕಳ್ಳಸಾಗಣೆಯಾಗುತ್ತಿದೆ.