ಕೋಲಾರ: ಸರ್ಕಾರಿ ಶಾಲೆಯಲ್ಲಿ ನೀಡುವ ಕ್ಷೀರ ಭಾಗ್ಯದ ಹಾಲು ಕುಡಿದು 10ಕ್ಕೂ ಹೆಚ್ಚು ಶಾಲಾ ಮಕ್ಕಳು ಹೊಟ್ಟೆ ನೋವು ಹಾಗೂ ವಾಂತಿ-ಬೇಧಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಪೊಂಪಲ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಗುರುವಾರ ಬೆಳಗ್ಗೆ 11 ಗಂಟಗೆ ಈ ಘಟನೆ ನಡೆದಿದ್ದು, ಅಸ್ವಸ್ಥಗೊಂಡ ಮಕ್ಕಳನ್ನ ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
ಮೊದಲಿಗೆ ಹೊಟ್ಟೆ ನೋವು, ವಾಂತಿ ಹಾಗೂ ಬೇಧಿಯಾಗಿ ಅಸ್ವಸ್ಥಗೊಂಡ 10ಕ್ಕೂ ಹೆಚ್ಚು ಮಕ್ಕಳಿಗೆ ಕಲುಷಿತ ಹಾಲು ನೀಡಿರುವುದೇ ಕಾರಣ ಎನ್ನಲಾಗಿದೆ. ಸದ್ಯ ಆಸ್ಪತ್ರೆಗೆ ಅಕ್ಷರದಾಸೋಹ ಅಧಿಕಾರಿಗಳು ಸೇರಿದಂತೆ ಆಹಾರ ನಿರೀಕ್ಷಕರು ಭೇಟಿ ನೀಡಿದ್ದು ಮಕ್ಕಳಿಗೆ ಯಾವುದೇ ಅಪಾಯ ಇಲ್ಲ ಎಂದು ಖಚಿತ ಪಡಿಸಿದ್ದಾರೆ.
Advertisement
ಈ ಘಟನೆಗೆ ನಿಖರ ಕಾರಣವನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಶಾಲೆ ವಿರುದ್ಧ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದು, ಆಸ್ಪತ್ರೆ ಹಾಗೂ ಶಾಲೆಗೆ ಅಂಡರ್‍ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.