ನವದೆಹಲಿ: ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿಯಾಗಬೇಕು, ಸ್ವಾಮಿನಾಥನ್ ವರದಿ ಜಾರಿಯಾಗಬೇಕು, ರೈತರಿಗೆ ಪಿಂಚಣಿ ಸೌಲಭ್ಯ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ರೈತರು ದೆಹಲಿಯಲ್ಲಿ ಮತ್ತೊಮ್ಮೆ ಐತಿಹಾಸಿಕ ಪ್ರತಿಭಟನೆ (Delhi Protest) ನಡೆಸಲು ತಿರ್ಮಾನಿಸಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಲು ಕರ್ನಾಟಕದಿಂದ ಆಗಮಿಸುತ್ತಿದ್ದ ರೈತರನ್ನು ಮಧ್ಯಪ್ರದೇಶದ ಭೂಪಾಲ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement
ರೈತರೊಂದಿಗೆ ಅಮಾನವೀಯ ವರ್ತನೆ:
ದೆಹಲಿಗೆ ಆಗಮಿಸುವ ವೇಳೆ ಭೂಪಾಲ್ ರೈಲ್ವೆ ನಿಲ್ದಾಣದಲ್ಲಿ ಮಧ್ಯರಾತ್ರಿ ಎರಡು ಗಂಟೆ ಸಮಯದಲ್ಲಿ ರೈಲಿನ ಒಳಗೆ ನುಗ್ಗಿದ ಪೊಲೀಸರು ಬಲವಂತವಾಗಿ ಬೆದರಿಸಿ ದಬ್ಬಾಳಿಕೆ ನಡೆಸಿ, ಮಹಿಳೆಯರನ್ನೂ ಸೇರಿ ರೈತರನ್ನು (Farmers) ರೈಲಿನ ಒಳಗೆ ಎಳೆದಾಡಲಾಗಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನೂ ಕೊಡಿಸದೇ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ. ಇದನ್ನೂ ಓದಿ: 200 ಸಂಘಟನೆಗಳು, 20,000 ರೈತರಿಂದ ನಾಳೆ `ದೆಹಲಿ ಚಲೋ’ – ದೆಹಲಿ ಗಡಿ ಬಂದ್!
Advertisement
Advertisement
ಬೆಳಗಾವಿ (Belagavi) ಜಿಲ್ಲೆಯ ಗುರುಸಿದ್ದಪ್ಪ, ಧಾರವಾಡ ಜಿಲ್ಲೆಯ ಪರಶುರಾಮ್, ಚಾಮರಾಜನಗರ ಜಿಲ್ಲೆಯ ಪಟೇಲ್ ಶಿವಮೂರ್ತಿ, ಮೂಕಳ್ಳಿ ಮಾದೇವಸ್ವಾಮಿ, ಹಾಸನ ಜಿಲ್ಲೆಯ ಧರ್ಮರಾಜ್, ಮೈಸೂರು ಜಿಲ್ಲೆಯ ಬರಡನಪುರ ನಾಗರಾಜ್, ಮಹೇಶ್, ಉಡಿಗಾಲ ರೇವಣ್ಣ, ಕುರುಬೂರು ಸಿದ್ದೇಶ್, ಗುರುಸ್ವಾಮಿ, ಗೌರಿಶಂಕರ್,ಕಮಲಮ್ಮ, ಪ್ರೇಮ, ಮಮತಾ, ಶ್ವೇತಾ, ನಾಗವೇಣಿ, ಪ್ರದೀಪ್ ಕುರುಬೂರು,. ಮಂಜೇಶ್ ಸೇರಿ ನೂರಕ್ಕೂ ಅಧಿಕ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement
ಘಟನೆಯ ಬಗ್ಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುರುಬೂರು ಶಾಂತಕುಮಾರ್ (Kurubur Shantakumar), ನಾಳೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆಗೆ ತಿರ್ಮಾನಿಸಿದೆ. ಭರವಸೆಗಳನ್ನು ನೀಡಿ ಒಂದು ವರ್ಷವಾದರೂ ಸರ್ಕಾರ ಬೇಡಿಕೆ ಈಡೇರಿಸಿಲ್ಲ. ರೈತರ ಸಾಲ ಮನ್ನಾ, ರೈತರಿಗೆ ಪಿಂಚಣಿ, ಬೆಂಬಲ ಬೆಲೆ ಕಾನೂನು, ಸ್ವಾಮಿನಾಥನ್ ವರದಿ ಅನಿಷ್ಠಾನಕ್ಕೆ ಮನವಿ ಮಾಡಿದೆ ಕೇಂದ್ರ ಸರ್ಕಾರ ಈವರೆಗೂ ಬೇಡಿಕೆ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನೆಗೆ ಕರೆ ನೀಡಿದೆ. ಇದನ್ನೂ ಓದಿ: ಆಂಧ್ರ ಸಿಎಂ ಜಗನ್ ತಮ್ಮ ಚಿಕ್ಕಪ್ಪನನ್ನೇ ಹತ್ಯೆಗೈದಿದ್ದಾರೆ – ಎನ್.ಚಂದ್ರಬಾಬು ನಾಯ್ಡು ಪುತ್ರ ಗಂಭೀರ ಆರೋಪ
ಫೆ.13ರಂದು ನಡೆಯಲಿರುವ ಪ್ರತಿಭಟನೆಗೂ ಮುನ್ನ ರೈತರನ್ನು ತಡೆಯುವ ಪ್ರಯತ್ನ ನಡೆಯುತ್ತಿದೆ. ದೆಹಲಿಗೆ ಆಗಮಿಸುವ ರೈತರನ್ನು ತಡೆಯಲಾಗುತ್ತಿದೆ. ಕರ್ನಾಟಕದಿಂದ ಆಗಮಿಸುತ್ತಿದ್ದ ನೂರಕ್ಕೂ ಅಧಿಕ ರೈತರನ್ನು ಭೂಪಾಲ್ ನಲ್ಲಿ ವಶಕ್ಕೆ ಪಡೆದು, ರೈತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ನನ್ನ ಪತ್ನಿಯೂ ಸೇರಿ ಹಲವು ಮಹಿಳೆಯರು ಗಾಯಗೊಂಡಿದ್ದಾರೆ ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ದೊಡ್ಡ ಗೆಲುವು – ಕತಾರ್‌ನಲ್ಲಿ ಅರೆಸ್ಟ್ ಆಗಿದ್ದ ನೌಕಾ ಅಧಿಕಾರಿಗಳು ಬಿಡುಗಡೆ, ಸ್ವದೇಶಕ್ಕೆ ವಾಪಸ್