ಮಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇದೇ ಮೊತ್ತಮೊದಲ ಬಾರಿಗೆ ಕಂಬಳ (Kambala) ಆಯೋಜನೆಗೊಳ್ಳುತ್ತಿದೆ. ನವೆಂಬರ್ 25 ಮತ್ತು 26ರಂದು ನಡೆಯುವ ಕಂಬಳದಲ್ಲಿ ಭಾಗವಹಿಸಲು ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ 100ಕ್ಕೂ ಅಧಿಕ ಜೋಡಿ ಕೋಣಗಳು (Buffalo) ಮಂಗಳೂರಿನಿಂದ (Mangaluru) ಮೆರವಣಿಗೆ ಮೂಲಕ ಬೆಂಗಳೂರಿಗೆ ತೆರಳಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ (Ashok Kumar Rai) ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಸಂಬಂಧಿಸಿದಂತೆ ಕಂಬಳ ಕೋಣಗಳ ಮಾಲೀಕರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನವೆಂಬರ್ 23ರಂದು ಮೆರವಣಿಗೆಯ ಮೂಲಕ ಕೋಣಗಳನ್ನು ಲಾರಿಯಲ್ಲಿ ಬೆಂಗಳೂರಿಗೆ ಕೊಂಡೊಯ್ಯಲಾಗುತ್ತದೆ. ಹಾಸನದಲ್ಲಿ ಎರಡು ಗಂಟೆಗಳ ಕಾಲ ಕೋಣಗಳಿಗೆ ವಿಶ್ರಾಂತಿ ಮತ್ತು ಆಹಾರ ನೀಡಲಾಗುತ್ತದೆ. ಬಳಿಕ ಚನ್ನರಾಯಪಟ್ಟಣ, ತುಮಕೂರಿನಲ್ಲಿ ವಿಶ್ರಾಂತಿ ಪಡೆದು ಬೆಂಗಳೂರಿಗೆ ಹೋಗಲಾಗುವುದು. ಹಾಸನ, ಚನ್ನರಾಯಪಟ್ಟಣ ಮತ್ತು ತುಮಕೂರಿನಲ್ಲಿ ಕರಾವಳಿಯ ಜನರು ಸೇರಿದಂತೆ ಸ್ಥಳೀಯರು ಕೋಣಗಳಿಗೆ ಸ್ವಾಗತಿಸಲಿದ್ದಾರೆ. ಈ ಕೋಣಗಳನ್ನು ಕೊಂಡೊಯ್ಯುವಾಗ ಪಶು ವೈದ್ಯಾಧಿಕಾರಿಗಳು ಮತ್ತು ಪಶು ಅಂಬುಲೆನ್ಸ್‌ಗಳು ಜೊತೆಗಿರಲಿದೆ ಎಂದರು. ಇದನ್ನೂ ಓದಿ: ಲಿಂಗಾಯತರ ವಿರುದ್ಧ ಸಿಎಂ ಪದೇ ಪದೇ ದ್ವೇಷ ಸಾಧಿಸುತ್ತಿದ್ದಾರೆ: ಬಿಜೆಪಿ ಟೀಕೆ
Advertisement
Advertisement
125 ಜೋಡಿ ಕೋಣಗಳಿಗೆ ಬೆಂಗಳೂರಿನಲ್ಲಿ ಟೆಂಟ್ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿದೆ. ಕೋಣಗಳ ಮಾಲೀಕರಿಗೆ ಕೊಠಡಿ ವ್ಯವಸ್ಥೆಯನ್ನು ಮಾಡಲಾಗಿದೆ. ಕೋಣಗಳಿಗೆ ನೀರಿನ ವ್ಯತ್ಯಾಸವಾಗಬಾರದೆಂಬ ನೆಲೆಯಲ್ಲಿ ಮಂಗಳೂರಿನಿಂದಲೇ 5 ಟ್ಯಾಂಕರ್ ನೀರನ್ನು ಅಲ್ಲಿಗೆ ಕೊಂಡೊಯ್ಯಲಾಗುತ್ತದೆ. ಕೋಣಗಳಿಗೆ ಬೈಹುಲ್ಲು, ಹುರುಳಿಯನ್ನು ಇಲ್ಲಿಂದಲೇ ಕೊಂಡೊಯ್ದು ಅಲ್ಲಿಯೇ ತಯಾರಿಸಿ ಕೊಡಲಾಗುತ್ತದೆ. ಈ ವರ್ಷ ಆರಂಭಿಸಲಾದ ಕಂಬಳಕ್ಕೆ ಉತ್ತಮ ಸ್ಪಂದನೆ ಸಿಕ್ಕಿದರೆ ಇದನ್ನು ಪ್ರತೀ ವರ್ಷ ಮುಂದುವರಿಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮತ್ತೆ ಕಾಂಗ್ರೆಸ್‌ನಲ್ಲಿ ಲಿಂಗಾಯತ ಬಾಂಬ್: ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗ್ತಾರಾ ಸಿಎಂ?
Advertisement
ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು, ಸ್ಯಾಂಡಲ್‌ವುಡ್, ಬಾಲಿವುಡ್ ಸ್ಟಾರ್ ನಟ-ನಟಿಯರು ಕಂಬಳಕ್ಕೆ ಬರುವ ನಿರೀಕ್ಷೆಯಿದೆ. ಈ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರು ಭಾಗಿಯಾಗಲಿದ್ದಾರೆ. ಈ ಕಂಬಳದಲ್ಲಿ 7 ರಿಂದ 8 ಲಕ್ಷ ಜನ ಸೇರುವ ನಿರೀಕ್ಷೆಯಿದೆ. 2,000 ಮಂದಿ ವಿಐಪಿಗಳಿಗೆ ಆಸನ ವ್ಯವಸ್ಥೆ ಮಾಡಲಾಗುತ್ತದೆ. 15 ಸಾವಿರ ಮಂದಿಗೆ ಗ್ಯಾಲರಿಯಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಒಂದೆಡೆ ಕಂಬಳ ನಡೆಯುತ್ತಿದ್ದರೆ, ಮತ್ತೊಂದೆಡೆ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು, ನೂರಕ್ಕೂ ಅಧಿಕ ಮಳಿಗೆಗಳಲ್ಲಿ ಕರಾವಳಿಯ ಆಹಾರ ಮಳಿಗೆಗಳನ್ನು ಅಳವಡಿಸಲಾಗುತ್ತದೆ ಎಂದರು. ಇದನ್ನೂ ಓದಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 209ರೂ. ಏರಿಕೆ
Advertisement
ಕಂಬಳವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯಲು ಬೆಂಗಳೂರು ಕಂಬಳವನ್ನು ಕರಾವಳಿಯಲ್ಲಿ ನಡೆಯುವ ಕಂಬಳದಂತೆ ಆಯೋಜಿಸಲಾಗುತ್ತದೆ. ಕಂಬಳಕ್ಕೆ ಸಂಬಂಧಿಸಿದಂತೆ ನೀತಿ ನಿಯಮಗಳನ್ನು, ಕಾನೂನುಗಳನ್ನು, ಸುಪ್ರೀಂ ಕೋರ್ಟ್ ಆದೇಶಗಳನ್ನು ಪಾಲಿಸಿಕೊಂಡು ವ್ಯವಸ್ಥೆ ಮಾಡಲಾಗುತ್ತಿದೆ. ಸುಮಾರು 5ರಿಂದ 6 ಕೋಟಿ ರೂ. ವೆಚ್ಚದಲ್ಲಿ ಕಂಬಳ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಅ.7 ರವರೆಗೆ 2,000 ರೂ. ನೋಟು ಬದಲಿಸಿಕೊಳ್ಳಲು ದಿನ ವಿಸ್ತರಿಸಿದ RBI
Web Stories