ನವದೆಹಲಿ: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಭಾರತೀಯ ಸೇನೆ (Indian Army) ತಿಳಿಸಿದೆ.
ಹಿರಿಯ ಮಿಲಿಟರಿ ಅಧಿಕಾರಿಗಳು ಭಾನುವಾರ ಸುದ್ದಿಗೋಷ್ಠಿ ನಡೆಸಿ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡರು. ಆಪರೇಷನ್ ಸಿಂಧೂರ ಅಡಿಯಲ್ಲಿ ಎಚ್ಚರಿಕೆಯಿಂದ ಚರ್ಚಿಸಿದ ನಂತರ ಭಾರತೀಯ ವಾಯುಪಡೆ (ಐಎಎಫ್) ಪಾಕಿಸ್ತಾನದಲ್ಲಿ ಒಂಬತ್ತು ಉಗ್ರರ ನೆಲೆಗಳನ್ನು ಟಾರ್ಗೆಟ್ ಮಾಡಿತು. ಮೇ 7 ರಂದು ದಾಳಿಗಳನ್ನು ನಡೆಸಿ, 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿತು ಎಂದು ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್ ದಾಳಿ ಮಾಡಿದರೆ ನಾವು ಭೀಕರ ದಾಳಿ ಮಾಡುತ್ತೇವೆ: ಮೋದಿ ಎಚ್ಚರಿಕೆ
#WATCH | Delhi: DGMO Lieutenant General Rajiv Ghai says “…Those strikes across those nine terror hubs left more than 100 terrorists killed, including high value targets such as Yusuf Azhar, Abdul Malik Rauf and Mudasir Ahmed that were involved in the hijack of IC814 and the… pic.twitter.com/IeH6Je6STE
— ANI (@ANI) May 11, 2025
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮೇಲೆ ಭಾರತ ನಡೆಸಿದ ಮಿಲಿಟರಿ ದಾಳಿಗಳು ಭಯೋತ್ಪಾದಕರನ್ನು ಕೊಲ್ಲುವ ಉದ್ದೇಶವನ್ನು ಹೊಂದಿದ್ದವು ಎಂದು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆ ಬಗ್ಗೆ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ, ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಮತ್ತು ಮೇಜರ್ ಜನರಲ್ ಸಂದೀಪ್ ಎಸ್ ಶಾರದಾ ವಿವರ ನೀಡಿದ್ದಾರೆ.
ಪಾಕಿಸ್ತಾನ ನಡೆಸಿದ ಡ್ರೋನ್ ದಾಳಿಗಳನ್ನು ಹಿಮ್ಮೆಟ್ಟಿಸುವಲ್ಲಿ ಭಾರತದ ವಾಯು ರಕ್ಷಣಾ ಪಡೆ ಯಶಸ್ವಿಯಾಗಿದೆ. ಜೊತೆಗೆ ಪ್ರತಿದಾಳಿ ಕೂಡ ನಡೆಸಿದೆ. ಪಾಕಿಸ್ತಾನದ ಲಾಹೋರ್‌ನಲ್ಲಿರುವ ರೆಡಾರ್ ಸ್ಥಾಪನೆಯನ್ನು ನಾಶಪಡಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಪಾಕ್ ಕದನ ವಿರಾಮ ಉಲ್ಲಂಘಿಸಿದ್ರೆ ಪ್ರತಿದಾಳಿ ನಡೆಸಿ – ಕಮಾಂಡರ್‌ಗಳಿಗೆ ಭಾರತೀಯ ಸೇನೆ ಪೂರ್ಣ ಅಧಿಕಾರ
ಪಾಕಿಸ್ತಾನದ ದಾಳಿಯನ್ನು ತಡೆಯಲು ಸೇನೆಯು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ವಿವರಿಸಿದ್ದಾರೆ.