ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಕೆಆರ್‌ಎಸ್ ಡ್ಯಾಂಗೆ (KRS Dam) 10 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ.
ಕಳೆದ ಮೂರು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆಯ ಅಬ್ಬರದಿಂದ ಕೆಆರ್‌ಎಸ್‌ಗೆ ಹರಿದು ಬಂದ ಅಧಿಕ ಒಳಹರಿವು ಬಂದಿದೆ. ಇಂದು ಕೆಆರ್‌ಎಸ್‌ಗೆ 13,437 ಕ್ಯೂಸೆಕ್ ಒಳಹರಿವು ಹೆಚ್ಚಾಗಿದೆ. ಈ ವರ್ಷದಲ್ಲಿ ಸದ್ಯ ಇದೇ ಅಧಿಕ ಪ್ರಮಾಣದ ಒಳಹರಿವು ಆಗಿದೆ. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯ
Advertisement
Advertisement
ನಿನ್ನೆ 3,856 ಕ್ಯೂಸೆಕ್ ಒಳಹರಿವು ಇತ್ತು. 24 ಗಂಟೆಯ ಅವಧಿಯಲ್ಲಿ 10 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಅಲ್ಲದೇ ಒಂದೇ ದಿನದಲ್ಲಿ 1 ಟಿಎಂಸಿಗೂ ಅಧಿಕ ನೀರು ಡ್ಯಾಂಗೆ ಹರಿದು ಬಂದಿದೆ. 49.452 ಟಿಎಂಸಿ ಗರಿಷ್ಠ ಸಾಮಾರ್ಥ್ಯದ ಕೆಆರ್‌ಎಸ್‌ನಲ್ಲಿ 16.118 ಟಿಎಂಸಿ ಸಂಗ್ರಹವಾಗಿದೆ. ನಿನ್ನೆ 15.007 ಟಿಎಂಸಿ ನೀರು ಇತ್ತು.
Advertisement
Advertisement
124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ನೀರು ಈಗ 90.30 ಅಡಿ ತಲುಪಿದೆ. ಇಂದಿನ ಹೊರಹರಿವು 478 ಕ್ಯೂಸೆಕ್ ಆಗಿದೆ. ಇದನ್ನೂ ಓದಿ: ಹಾವೇರಿ ಬಳಿ ಭೀಕರ ಅಪಘಾತ- 13 ಮಂದಿ ದುರ್ಮರಣ