ಚಿಕ್ಕಬಳ್ಳಾಪುರ: ಕೆಎಸ್‍ಆರ್ ಟಿಸಿ ಬಸ್ಸೊಂದು ರಸ್ತೆ ಬಿಟ್ಟು ಹಳ್ಳಕ್ಕೆ ನುಗ್ಗಿದ್ದು, ಸುಮಾರು 15 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿಯಲ್ಲಿ ನಡೆದಿದೆ.
ಬಾಗೇಪಲ್ಲಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7ರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಈ ಅವಘಡ ಸಂಭವಿಸಿದ್ದು, ಈ ಘಟನೆಯಲ್ಲಿ ಚಾಲಕ ಸೇರಿ 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.
Advertisement
Advertisement
ಕೆಎಸ್‍ಆರ್ ಟಿಸಿ ಬಸ್ ಚಿಕ್ಕಬಳ್ಳಾಪುರ ದಿಂದ ಬಾಗೇಪಲ್ಲಿ ಗೆ ಸಂಚರಿಸುತ್ತಿತ್ತು. ಆದರೆ ಇದ್ದಕ್ಕಿದ್ದಂತೆ ಬಸ್ ನ ಟೈರ್ ಸ್ಪೋಟಗೊಂಡು ಅಫಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದ 15 ಮಂದಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಬಸ್ ಚಾಲಕ ಸೇರಿದಂತೆ ನಾಲ್ವರನ್ನ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
Advertisement
ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಬಸ್ ನ ಮುಂಭಾಗ ಜಖಂಗೊಂಡಿದ್ದು, ಗಾಜು ಪುಡಿ ಪುಡಿಯಾಗಿದೆ. ಆದರೆ ಅದೃಷ್ಟವಶಾತ್ ಬಸ್ ಪಲ್ಟಿಯಾಗಿಲ್ಲ. ಹೀಗಾಗಿ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
Advertisement