ಕಾರವಾರ: ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ ಜಿಲ್ಲೆಗಳ ದೇವಸ್ಥಾನಗಳಲ್ಲಿ (Temple) ಭಾರೀ ಸೊತ್ತುಗಳ ಕಳ್ಳತನ (Theft) ಮಾಡಿದ್ದ ಇಬ್ಬರು ಆರೋಪಿಗಳನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾವೇರಿ ರಟ್ಟಿಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕನಾಗಿರುವ (Teacher) ವಸಂತ ಕುಮಾರ್ (40), ರಾಣೆಬೆನ್ನೂರಿನ ಗುಡ್ಡದಬೇವಿನಹಳ್ಳಿಯ ಸಲೀಂ (28) ಬಂಧಿತ ಆರೋಪಿಗಳಾಗಿದ್ದಾರೆ. ಇವರು ಯಲ್ಲಾಪುರ ತಾಲೂಕಿನ ಮಂಚಿಕೇರಿ ಗ್ರಾಮದ ಶ್ರೀ ಮಹಾಗಜಲಕ್ಷ್ಮೀ ದೇವಸ್ಥಾನ, ಗುಳ್ಳಾಪುರದ ಶ್ರೀ ಶಿವವ್ಯಾಘ್ರೇಶ್ವರ ದೇವಸ್ಥಾನ ಸೇರಿದಂತೆ ಹಲವೆಡೆ ಕಳ್ಳತನ ಮಾಡಿ ದೇವರ ಹುಂಡಿ ಸೇರಿದಂತೆ ಹಲವು ವಸ್ತುಗಳನ್ನು ದರೋಡೆ ಮಾಡಿದ್ದರು.
Advertisement
Advertisement
ಯಲ್ಲಾಪುರ, ಅಂಕೋಲಾ, ಶಿರಸಿ ಗ್ರಾಮೀಣ, ಬನವಾಸಿ, ಶಿವಮೊಗ್ಗ, ರಿಪ್ಪನ್‌ಪೇಟೆ, ಹೊಸನಗರ, ಹಾವೇರಿಯ ಹಂಸಬಾವಿ, ಹಿರೇಕೆರೂರು, ಹಾವೇರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ 18 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು ಕಳೆದ 3-4 ವರ್ಷದಿಂದ ದರೋಡೆ ಮಾಡಿಕೊಂಡೇ ಐಷಾರಾಮಿ ಜೀವನ ಸಾಗಿಸುತ್ತಿದ್ದರು.
Advertisement
ಎಸ್‌ಪಿ ವಿಷ್ಣುವರ್ಧನ್ ಮಾರ್ಗದರ್ಶನಲ್ಲಿ ಯಲ್ಲಾಪುರ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರ್ ಹಾಗೂ ತಂಡದಿಂದ ಕಾರ್ಯಾಚರಣೆ ನಡೆಸಿ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಒಟ್ಟು 19,20,285 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: 6 ಮದುವೆ, 54 ಮಕ್ಕಳಿಗೆ ತಂದೆಯಾದ ಪಾಕಿಸ್ತಾನಿ ವ್ಯಕ್ತಿ ಸಾವು
Advertisement
ಕೃತ್ಯಕ್ಕೆ ಬಳಸಿದ್ದ 12 ಲಕ್ಷ ರೂ. ಮೌಲ್ಯದ ಒಂದು ಎಸ್ ಕ್ರಾಸ್ ಕಾರು, 30,000 ರೂ. ಮೌಲ್ಯದ ಬಜಾಜ್ ಪ್ಲಾಟಿನಾ ಕಂಪನಿಯ ಮೋಟಾರ್ ಬೈಕ್, 2,29,000 ರೂ. ನಗದು, 50,000 ರೂ. ಮೌಲ್ಯದ 9 ಗ್ರಾಂ ತೂಕದ ದೇವರ ಆಭರಣ, 1,80,400 ರೂ. ಮೌಲ್ಯದ 3.400 ಕೆ.ಜಿ ತೂಕದ ದೇವರ ಬೆಳ್ಳಿಯ ಆಭರಣ, 1,45,000 ರೂ. ಮೌಲ್ಯದ 140 ಹಿತ್ತಾಳೆಯ ಗಂಟೆಗಳು, 39,550 ರೂ. ಮೌಲ್ಯದ 27 ಹಿತ್ತಾಳೆಯ ದೀಪಗಳು, 9,600 ರೂ. ಮೌಲ್ಯದ 22 ಹಿತ್ತಾಳೆಯ ತೂಗು ದೀಪಗಳು, 13,500 ರೂ. ಮೌಲ್ಯದ 7 ತಾಮ್ರದ ಕೊಡಗಳು, 13,235 ರೂ. ಮೌಲ್ಯದ 35 ಹಿತ್ತಾಳೆ ಹಾಗೂ ತಾಮ್ರದ ಪೂಜಾ ಸಾಮಾಗ್ರಿಗಳು, 10,000 ರೂ. ಮೌಲ್ಯದ ಡಿವಿಆರ್ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಕರ್ನಾಟಕ ಎಲೆಕ್ಷನ್ ಗೆಲ್ಲಲು ಕಾಂಗ್ರೆಸ್ ರೋಡ್‌ಮ್ಯಾಪ್ – ಎಲ್ಲೆಲ್ಲಿ ಏನೇನು ಕಾರ್ಯಕ್ರಮ?