Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀರಂಗಪಟ್ಟಣ ತಾಲೂಕಿನ ಗ್ರಾಪಂನಲ್ಲಿ 2 ಕೋಟಿಗೂ ಅಧಿಕ ಅಕ್ರಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶ್ರೀರಂಗಪಟ್ಟಣ ತಾಲೂಕಿನ ಗ್ರಾಪಂನಲ್ಲಿ 2 ಕೋಟಿಗೂ ಅಧಿಕ ಅಕ್ರಮ

Districts

ಶ್ರೀರಂಗಪಟ್ಟಣ ತಾಲೂಕಿನ ಗ್ರಾಪಂನಲ್ಲಿ 2 ಕೋಟಿಗೂ ಅಧಿಕ ಅಕ್ರಮ

Public TV
Last updated: April 12, 2026 9:03 pm
Public TV
Share
3 Min Read
Money
SHARE

– 21 ಗ್ರಾಮ ಪಂಚಾಯಿತಿಗಳಿಂದ ಸಂಗ್ರಹಿಸಿದ್ದ ತೆರಿಗೆ ಹಣ ದುರುಪಯೋಗ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ 21 ಗ್ರಾಮ ಪಂಚಾಯಿತಿಗಳು ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆ ಹಣದಲ್ಲಿ 2,83,34,944 ರೂ. ಹಣವನ್ನು ಗ್ರಾಮ ಪಂಚಾಯಿತಿ ನಿಧಿಗೆ ಜಮೆ ಮಾಡದೇ ಅಧಿಕಾರಿಗಳೇ ದುರುಪಯೋಗಪಡಿಸಿಕೊಂಡಿರುವ ಪ್ರಕರಣ ಲೋಕಾಯುಕ್ತ ತನಿಖೆಯಿಂದ ಬಹಿರಂಗೊಂಡಿದೆ.

1994-95ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಸ್ಥಳೀಯ ಲೆಕ್ಕ ಪರಿಶೋಧನಾ ವರದಿಗಳ ಪ್ರಕಾರ ಗ್ರಾಮ ಪಂಚಾಯಿತಿಗಳು ಜನರಿಂದ ಪಡೆದ ತೆರಿಗೆ ಹಣವನ್ನು ಗ್ರಾಮ ಪಂಚಾಯಿತಿ ನಿಧಿಗೆ ಜಮಾ ಮಾಡದಿರುವುದು ಕಂಡುಬಂದಿದೆ. ಈ ಹಣವನ್ನು ಅಧಿಕಾರಿಗಳೇ ದುರ್ಬಳಕೆ ಮಾಡಿಕೊಂಡು ಸರ್ಕಾರಕ್ಕೆ ನಷ್ಟ ಉಂಟುಮಾಡಿರುವುದಾಗಿ ಲೋಕಾಯುಕ್ತ ತನಿಖಾ ತಂಡ ವರದಿಯಲ್ಲಿ ತಿಳಿಸಿದೆ.

ಕಿರಂಗೂರು ಮೋಹನ್‌ಕುಮಾರ್ ಅವರು ಕಿರಂಗೂರು ಗ್ರಾಪಂನಲ್ಲಿ 2 ಎಕರೆ 33 ಗುಂಟೆ ಜಮೀನನ್ನು ವಾಣಿಜ್ಯ ಉದ್ದೇಶಕ್ಕೆ ಅನ್ಯಕ್ರಾಂತ ಮಾಡಿಸಿಕೊಂಡಿದ್ದಾರೆ. ಇದರಲ್ಲಿ ಅಕ್ರಮವಾಗಿ ವಸತಿ ಬಡಾವಣೆ ಉದ್ದೇಶಕ್ಕೆ ನಕಲಿ ಬಹು ವಿನ್ಯಾಸ ನಕ್ಷೆ ತಯಾರಿಸಿ ಕಿರಂಗೂರು ಗ್ರಾಪಂನಿಂದ ಇ-ಸ್ವತ್ತುಗಳನ್ನು ಕೊಟ್ಟಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದರು. ಇದನ್ನೂ ಓದಿ: ಮಂಗಳೂರಿನ ಪಂಪ್‌ವೆಲ್‌ನಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು 

gram panchayat

ದೂರು ಅರ್ಜಿಯಲ್ಲಿನ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದ್ದರಿಂದ ಲೋಕಾಯುಕ್ತ ಪೊಲೀಸರಿಗೆ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ತಾಪಂ ಕಾರ್ಯನಿರ್ವಹಣಾಧಿಕಾರಿ ಕಚೇರಿ, ಶ್ರೀರಂಗಪಟ್ಟಣ ತಾಲೂಕು ಕಚೇರಿ ಹಾಗೂ ಕಿರಂಗೂರು ಗ್ರಾಪಂ ಕಚೇರಿಯನ್ನು ಶೋಧನೆ ನಡೆಸಲು ವಾರೆಂಟ್ ಹೊರಡಿಸಿದ್ದರು.

ಶ್ರೀರಂಗಪಟ್ಟಣ ತಾಲೂಕು ಕಚೇರಿ ಶೋಧನೆ ಮಾಡಲು ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ, ಪೊಲೀಸ್ ಉಪಾಧೀಕ್ಷಕ ಹೆಚ್.ಟಿ.ಸುನೀಲ್‌ಕುಮಾರ್ ನೇತೃತ್ವದ ತಂಡ ಹಾಗೂ ಕಿರಂಗೂರು ಗ್ರಾಪಂ ಕಚೇರಿ ಶೋಧನೆಗೆ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಎಂ.ರವಿಕುಮಾರ್, ಆರ್.ಜಿ.ಲೇಪಾಕ್ಷಮೂರ್ತಿ ನೇತೃತ್ವದ ಎರಡು ತಂಡಗಳನ್ನು ರಚಿಸಿಕೊಂಡು ಶೋಧನೆಗಳಿದಾಗ ಅಕ್ರಮಗಳ ಸರಮಾಲೆಗಳು ಬೆಳಕಿಗೆ ಬಂದವು. ಇದನ್ನೂ ಓದಿ: ಸಚಿವ ಸಂಪುಟ ಪುನಾರಚನೆಗೆ ತೀವ್ರಗೊಂಡ ಕೂಗು – ದೆಹಲಿಗೆ ಹೊರಟ ಹಿರಿಯ ಶಾಸಕರ ತಂಡ

ಜಮೀನುಗಳ ವಿನ್ಯಾಸನಕ್ಷೆ ಅನುಮೋದನೆಗೆ ಅರ್ಜಿದಾರರು ಅರ್ಜಿಯನ್ನು ಪಂಚಾಯಿತಿಗೆ ಸಲ್ಲಿಸಿರುವ ಬಗ್ಗೆ ಗ್ರಾಪಂನಿಂದ ತಾಲೂಕು ಪಂಚಾಯಿತಿಗೆ ಅನುಮೋದನೆ ಸಂಬಂಧ ಪತ್ರ ವ್ಯವಹಾರ ನಡೆಸಿರುವ ದಾಖಲೆಗಳೇ ಇಲ್ಲ. ಕೇವಲ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಿರುವ ಆದೇಶ ಪ್ರತಿ ಮಾತ್ರ ಕಂಡುಬಂದಿದೆ. ತಾಪಂ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ವೇಣು ಅರ್ಜಿದಾರರು ಕೋರಿಕೆ ಸಲ್ಲಿಸದಿದ್ದರೂ ವಿನ್ಯಾಸನಕ್ಷೆಗೆ ಅನುಮೋದನೆ ನೀಡಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಸೇರಿದ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ, ಮೊಗರಹಳ್ಳಿ, ಅಣಗನಹಳ್ಳಿ, ಗ್ರಾಮದ ಹಲವಾರು ಸರ್ವೆ ನಂಬರ್‌ಗಳಲ್ಲಿರುವ ಜಮೀನುಗಳಲ್ಲಿ ತಮ್ಮ ಅಧಿಕಾರ ವ್ಯಾಪ್ತಿ ಮೀರಿ ವಿನ್ಯಾಸನಕ್ಷೆ ಅನುಮೋದನೆ ಮಾಡಿರುವುದು ಕಂಡುಬಂದಿದೆ. 2022ನೇ ಸಾಲಿನ ಭೂ ಪರಿವರ್ತಿತ ಜಮೀನಿನ ಅನುಮೋದಿತ ವಿನ್ಯಾಸ ನಕ್ಷೆಯ 42 ಕಡತಗಳಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಡಿರುವ ಅಂತಿಮ ವಿನ್ಯಾಸ ನಕ್ಷೆ ಅನುಮೋದನೆ ಆದೇಶವನ್ನು ಹೊರತುಪಡಿಸಿ ಯಾವುದೇ ದಾಖಲೆಗಳು ಕಚೇರಿಯಲ್ಲಿ ಕಂಡುಬಂದಿಲ್ಲ. ಸರ್ಕಾರದ ಮಾರ್ಗಸೂಚಿಯಂತೆ ನಿಗದಿತ ವಿಸ್ತೀರ್ಣದಲ್ಲಿ ರಸ್ತೆ, ಉದ್ಯಾನವನ, ಪಾರ್ಕಿಂಗ್‌ಗಳನ್ನು ವಿನ್ಯಾಸ ನಕ್ಷೆಯಲ್ಲಿ ಅನುಮೋದಿಸದೆ ಅನುಮೋದನೆ ನೀಡಲಾಗಿದೆ. ಇದನ್ನೂ ಓದಿ:  ಆಶಾ ಭೋಸ್ಲೆ ಅಗಲಿಕೆಯಿಂದ ಸಂಗೀತದ ಒಂದು ಸುವರ್ಣ ಯುಗ ಅಂತ್ಯ: ಜೋಶಿ ಕಂಬನಿ

ಕಿರಂಗೂರು, ಜಕ್ಕನಹಳ್ಳಿ, ಹೊಸಹಳ್ಳಿ, ಬೆಳಗೊಳ, ಚಿಕ್ಕಅಂಕನಹಳ್ಳಿ, ಕೆ.ಆರ್.ಸಾಗರ, ನೆಲಮನೆ, ನೀಲನಕೊಪ್ಪಲು, ಅಗ್ರಹಾರ, ಕೆ.ಶೆಟ್ಟಹಳ್ಳಿ, ಕಡತನಾಳು, ಬ್ರಹ್ಮಪುರ, ದರಸಗುಪ್ಪೆ, ನಗುವಿನಹಳ್ಳಿ ಗ್ರಾಮದ ನೂರಾರು ಸರ್ವೆ ನಂಬರ್‌ಗಳಲ್ಲಿ ಪಾರ್ಕಿಂಗ್ ಜಾಗ, ಕಾಲುವೆ ಯಾವ ರೀತಿ ಇದೆ, ಬಫರ್‌ಜೋನ್ ಸೇರಿದಂತೆ ಹಲವಾರು ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ವಿನ್ಯಾಸನಕ್ಷೆ ಅನುಮೋದನೆ ನೀಡಲಾಗಿದೆ. ಹಲವಾರು ಪ್ರಕರಣಗಳಲ್ಲಿ ಏಕ ನಿವೇಶನಕ್ಕೆ ಅನುಮತಿ ಪಡೆಯಲು ಅರ್ಜಿ ಸಲ್ಲಿಸಿ ಬಹು ನಿವೇಶನಗಳ ನಕಾಶೆ ಲಗತ್ತಿಸಿದ್ದರೂ ಅನುಮೋದನೆ ನೀಡಿದೆ. ಹಲವೆಡೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆದಿಲ್ಲವೆಂದು ತಿಳಿಸಲಾಗಿದೆ.

TAGGED:Gram Panchayatillegal moneylokayuktamandyaSrirangapatnaಅಕ್ರಮ ಹಣಗ್ರಾಮ ಪಂಚಾಯಿತಿಮಂಡ್ಯಲೋಕಾಯುಕ್ತಶ್ರೀರಂಗಪಟ್ಟಣ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Ramanagara Farmer Death copy
Districts

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವು

Public TV
By Public TV
23 minutes ago
Two sons die in family dispute Mother attempts suicide after poisoning children
Bengaluru City

ಕೌಟುಂಬಿಕ ಕಲಹಕ್ಕೆ ಎರಡು ಕಂದಮ್ಮಗಳು ಬಲಿ: ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಆತ್ಮಹತ್ಯೆಗೆ ಯತ್ನ

Public TV
By Public TV
46 minutes ago
Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
51 minutes ago
Two boys who went swimming drowned in Kapaleeshwarar Temple Belagavi
Belgaum

ಕಪಿಲೇಶ್ವರ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು

Public TV
By Public TV
2 hours ago
Indian Ship Carrying LPG
Latest

ಹಾರ್ಮುಜ್‌ ದಾಟಿದ 45,000 ಟನ್‌ ಎಲ್‌ಪಿಜಿ ಹೊತ್ತ ಭಾರತದ ‘ಸರ್ವಶಕ್ತಿ’ ಹಡಗು

Public TV
By Public TV
2 hours ago
West Bengal Election Missing CCTV footage for long hours Multiple instances of group voting Daylight rigging exposed in Falta constituency
Latest

ಗಂಟೆಗಟ್ಟಲೇ ಸಿಸಿಟಿವಿ ಬಂದ್‌, ಬೂತ್‌ನಿಂದಲೇ ಪ್ರತಿಪಕ್ಷಗಳ ಏಜೆಂಟ್‌ಗಳು ಹೊರಕ್ಕೆ: ಬೆಚ್ಚಿ ಬೀಳಿಸುವಂತಿದೆ ಫಾಲ್ಟಾ ಅಕ್ರಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?