ಯಾದಗಿರಿ: ಹಾಸ್ಟೆಲ್ ನಲ್ಲಿ ಮಧ್ಯಾಹ್ನದ ಊಟ ಮಾಡಿದ ನಂತರ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ನಗರದ ಗಂಜ್ ಪ್ರದೇಶದಲ್ಲಿ ನಡೆದಿದೆ.
ನಗರದ ಗಂಜ್ ಪ್ರದೇಶದ ಬಳಿಯಿರುವ ಎಸ್‍ಸಿ-ಎಸ್‍ಟಿ ಹಾಸ್ಟೆಲ್‍ನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಮಧ್ಯಾಹ್ನದ ಊಟ ಮಾಡಿದ ನಂತರ ಪಿಯುಸಿ ಮತ್ತು ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳು ವಾಂತಿ ಮಾಡಿಕೊಳ್ಳುವುದು ಹಾಗೂ ತಲೆಸುತ್ತು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇತರೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫುಡ್ ಪಾಯ್ಸನ್‍ನಿಂದ ವಿದ್ಯಾರ್ಥಿಗಳಿಗೆ ಈ ರೀತಿ ಆಗಿರಬಹುದೆಂದು ವೈದ್ಯರು ಹೇಳಿದ್ದಾರೆ.
Advertisement