ಬೀದರ್: ತುಷ್ಠೀಕರಣ ರಾಜಕಾರಣ ಖಂಡಿಸಿ ಡಿಕೆ ಶಿವಕುಮಾರ್ (DK Shivakumar) ಪ್ರತಿಕೃತಿ ಸುಟ್ಟು 200ಕ್ಕೂ ಹೆಚ್ಚು ಬಿಜೆಪಿ (BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸದನದಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಾಗೂ ಡಿಕೆಶಿ ತುಷ್ಠೀಕರಣ ನೀತಿ ರಾಜಕಾರಣ ಖಂಡಿಸಿ ಬೀದರ್ ನಗರದ ಅಂಬೇಡ್ಕರ್ ವೃತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ನಾಯಕರು ಹಾಗೂ ಪೊಲೀಸರ ನಡುವೆ ಜಟಾಪಟಿ ನಡೆದಿದ್ದು, ಬಿಜೆಪಿ ನಾಯಕರು ಡಿಕೆಶಿ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ:ತೆಲಂಗಾಣ ಸುರಂಗ ಕುಸಿತ – ತಿಂಗಳ ಬಳಿಕ ಮತ್ತೋರ್ವ ಕಾರ್ಮಿಕನ ಶವ ಪತ್ತೆ
ಇನ್ನೂ ಇದೇ ವೇಳೆ ಡಿಕೆ ಶಿವಕುಮಾರ್ ಪ್ರತಿಕೃತಿಗೆ ಕಾಲಿನಿಂದ ಒದ್ದು ಆಕ್ರೋಶ ಹೊರಹಾಕಿ, ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು. ಈ ರ‍್ಯಾಲಿಯಲ್ಲಿ 200ಕ್ಕೂ ಅಧಿಕ ಜನ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಇನ್ನೂ ಇದೇ ವೇಳೆ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ ಶರಣು ಸಲಗರ್ ಅವರು, ವಿಧಾನಸೌಧ 7 ಕೋಟಿ ಜನರ ದೇವಾಲಯವಿದ್ದಂತೆ. ವಿಧಾನಸೌಧದಲ್ಲಿ ಕಾಂಗ್ರೆಸ್ಸಿಗರು ಟಿಪ್ಪು ಸುಲ್ತಾನ್, ಔರಂಗಜೇಬ್‌ನ ನೀತಿ ಅನುಸರಿಸುತ್ತಿದ್ದಾರೆ. ನಿಮ್ಮ ನಿರ್ಣಯಗಳ ವಿರುದ್ಧ ತೊಡೆ ತಟ್ಟಿ ಹೋರಾಟ ಮಾಡ್ತೇವೆ. ರಾಹುಲ್ ಗಾಂಧಿ ಹೊರದೇಶದಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದಿದ್ದರು. ಈಗ ರಾಜ್ಯದ ಉಪಮುಖ್ಯಮಂತ್ರಿಯವರು ಬದಲಾವಣೆ ಮಾಡುತ್ತೇವೆ ಅಂದಿದ್ದಾರೆ. ಮುಂದೆ ಸಿಎಂ ಆಗುವಂತವರೂ ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂದಿದ್ದಾರೆ. ಡಿಕೆಶಿ ಅವರ ಬೇಜವಾಬ್ದಾರಿತನದ ಹೇಳಿಕೆ ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ:ಚಾ.ನಗರ: ಕೆಎಸ್‌ಆರ್‌ಟಿಸಿ ಬಸ್-ಟಾಟಾ ಏಸ್ ನಡುವೆ ಡಿಕ್ಕಿ; ಇಬ್ಬರು ಸಾವು