– ಇಡೀ ದಿನ ಜನರ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
– ಒಂದು ತಿಂಗಳೊಳಗೆ ಸಮಸ್ಯೆ ಪರಿಹಾರಕ್ಕೆ ಸಿಎಂ ಡೆಡ್‌ಲೈನ್
ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ನಡೆದ ‘ಜನಸ್ಪಂದನ’ (Janaspandana) ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ. ಸುಮಾರು 11 ಸಾವಿರ ಅರ್ಜಿಗಳು ಸ್ವೀಕಾರವಾಗಿದ್ದು, ಒಂದೇ ತಿಂಗಳಲ್ಲಿ ಜನರಿಗೆ ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳಿಗೆ ಡೆಡ್‌ಲೈನ್ ನೀಡಿದ್ದಾರೆ.
Advertisement
ಮೊಟ್ಟ ಮೊದಲ ಬಾರಿಗೆ ವಿಧಾನಸೌಧದಲ್ಲಿ ನಡೆದ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಸಾವಿರಾರು ಜನರ ಸಮಸ್ಯೆ ಆಲಿಸಿದ ಸಿಎಂ ಸ್ಥಳದಲ್ಲಿ ಪರಿಹಾರ ಕೊಟ್ಟರು. ಉಳಿದ ಅರ್ಜಿಗಳಿಗೆ ಒಂದು ತಿಂಗಳಲ್ಲಿ ಪರಿಹಾರ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಮಂಗಳೂರಿಗೆ CGHS ವೆಲ್‌ನೆಸ್ ಸೆಂಟರ್ ಮಂಜೂರು: ನಳಿನ್ ಹರ್ಷ
Advertisement
Advertisement
ಬೆಳಗ್ಗೆ 11:30 ಕ್ಕೆ ಪ್ರಾರಂಭವಾದ ಜನ ಸ್ಪಂದನ ಕಾರ್ಯಕ್ರಮ ಸಂಜೆ 4:30 ವರೆಗೆ ನಡೆಯಿತು. ಪ್ರತಿ ಇಲಾಖಾವಾರು ಕೌಂಟರ್‌ಗಳನ್ನ ಸಿದ್ದಪಡಿಸಲಾಗಿತ್ತು. ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಹೊತ್ತು ಜನರು ಕೌಂಟರ್‌ಗಳಲ್ಲಿ ಕೂತಿದ್ದರು. ಖುದ್ದು ಜನರ ಬಳಿ ಸಿಎಂ ತೆರಳಿ ಅರ್ಜಿ ಸ್ವೀಕಾರ ಮಾಡಿದರು. ಸಮಚಿತ್ತದಿಂದ ಎಲ್ಲರ ಸಮಸ್ಯೆ ಆಲಿಸಿದರು. 150 ಕ್ಕೂ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕೊಟ್ಟರು. ಒಟ್ಟು 20 ಸಾವಿರಕ್ಕೂ ಹೆಚ್ಚು ಮಂದಿ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸುಮಾರು 11 ಸಾವಿರ ಅರ್ಜಿಗಳು ಸಮಸ್ಯೆ ಪರಿಹಾರಕ್ಕೆ ಸಲ್ಲಿಕೆಯಾದವು.
Advertisement
ಯೋಧನಿಂದ ತ್ರಿಚಕ್ರ ವಾಹನಕ್ಕೆ ಬೇಡಿಕೆ
ಮಗನಿಗೆ ಕೆಲಸಬೇಕು. ಮನೆ ಮಾಲೀಕ ಕಿರುಕುಳ ಕೊಡ್ತಿದ್ದಾನೆ. ಗೃಹಲಕ್ಷ್ಮಿ ಹಣ ಬಂದಿಲ್ಲ. ಯೋಧನಿಂದ ತ್ರಿಚಕ್ರ ವಾಹನಕ್ಕೆ ಡಿಮ್ಯಾಂಡ್. ನನ್ನ ಜಮೀನಿನ ದಾಖಲೆ ಬೇರೆಯವರಿಗೆ ಅಧಿಕಾರಿಗಳು ದಾಖಲಾತಿ ಮಾಡಿಕೊಟ್ಟಿದ್ದಾರೆ. ಹೀಗೆ ಹತ್ತು ಹಲವು ಸಮಸ್ಯೆ ಹೊತ್ತು ಸಾವಿರಾರು ಜನರು ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದರು. ಕಂದಾಯ ಇಲಾಖೆ, ವಸತಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ದೂರುಗಳೇ ಜನಸ್ಪಂದನದಲ್ಲಿ ಹೆಚ್ಚಾಗಿ ಕಂಡು ಬಂದವು. ಇದನ್ನೂ ಓದಿ: ಪರಶುರಾಮ ಥೀಂ ಪಾರ್ಕ್ ಬಗ್ಗೆ ಸಿಐಡಿ ತನಿಖೆ ನಡೆಸುವುದನ್ನು ಸ್ವಾಗತಿಸುತ್ತೇನೆ: ಸುನಿಲ್ ಕುಮಾರ್
ಖುದ್ದು ಸಿಎಂ ಸಿದ್ದರಾಮಯ್ಯ ಪ್ರತಿ ಕೌಂಟರ್‌ಗೆ ತೆರಳಿ ಅರ್ಜಿ ಸ್ವೀಕಾರ ಮಾಡಿದರು. ಸ್ಥಳದಲ್ಲಿ ಪರಿಹಾರ ಆಗುವ ಸಮಸ್ಯೆಗೆ ಪರಿಹಾರವನ್ನು ಘೋಷಣೆ ಮಾಡಿದರು. ಡಬಲ್ ಡಿಗ್ರಿ ಮುಗಿಸಿರುವ ಬೆಂಗಳೂರಿನ ನಿವಾಸಿ ವಿಶೇಷಚೇತನ ನವ್ಯಶ್ರೀ ಅವರು ತಾಯಿ ರಮಾಮಣಿ ಅವರ ಜತೆ ಬಂದು ಉದ್ಯೋಗಕ್ಕಾಗಿ CM ಗೆ ಮನವಿ ಮಾಡಿದರು. ಉದ್ಯೋಗ ಮೇಳದ ವೇಳೆ ಈ ಅರ್ಜಿಯನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ವಿಶೇಷಚೇತನ ಸತ್ಯನಾರಾಯಣ ಅವರು ತಮ್ಮ ಡಯಾಲಿಸಿಸ್‌ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕೊಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಅರ್ಜಿ ಪರಿಶೀಲಿಸಿ ಚಿಕಿತ್ಸೆಗೆ ನೆರವು ನೀಡುವಂತೆ ಸೂಚಿಸಿದರು. ಬೆಂಗಳೂರಿನ ಜೆ.ಜೆ ನಗರ ನಿವಾಸಿ ಎಂ.ಶ್ರೀಧರ್ ಅವರ ಎರಡೂ ಮೂತ್ರಪಿಂಡಗಳು ವಿಫಲವಾಗಿದ್ದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಕೋರಿ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಇವರ ಸಮಸ್ಯೆಗೆ ಕೂಡಲೇ ಸ್ಪಂದಿಸಿ ಪರಿಹಾರ ನೀಡುವ ಭರವಸೆ ನೀಡಿದರು.
ರಾಯಚೂರಿನ ಮೂರು ವರ್ಷದ ಶುಶಾಂತ್, ಥಲೆಸ್ಸೆಮಿಯಾ ಕಾಯಿಲೆಗೆ ತುತ್ತಾಗಿದ್ದಾನೆ. ಈತನನ್ನು ಜನಸ್ಪಂದನ ಕಾರ್ಯಕ್ರಮಕ್ಕೆ ಕರೆತಂದ ತಾಯಿ ಲಲಿತಾ ಅವರು ಆರ್ಥಿಕ ಸಹಾಯವನ್ನು ಕೋರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಪರಿಹಾರ ನಿಧಿಯಿಂದ ನೆರವು ಒದಗಿಸಲಾಗುವುದು ಎಂದು ಅರ್ಜಿಯನ್ನು ಸ್ವೀಕರಿಸಿ ಭರವಸೆ ನೀಡಿದರು. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಬಂತಹಳ್ಳಿ ಗ್ರಾಮದ 50 ವರ್ಷದ ನಾರಾಯಣಸ್ವಾಮಿ ಖಾತೆ ಬದಲಾವಣೆ ಮಾಡಲಾಗಿದ್ದು ಸರಿಪಡಿಸಿಕೊಡಿ ಎಂದು ಮುಖ್ಯಮಂತ್ರಿಗಳನ್ನು ಕೋರಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಪ್ರಕರಣದ ಕುರಿತು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದರು. ತುಮಕೂರಿನ ಮಾಡಗಶಿರಾ ಗ್ರಾಮದ ಶಾಂತಿಬಾಯಿ ಅವರ ಬುದ್ಧಿಮಾಂದ್ಯ ಮಗುವಿಗೆ ಚಿಕಿತ್ಸೆ ಮಾಡಿಸಲು ನೆರವು ಕೋರಿ ಮುಖ್ಯಮಂತ್ರಿಗಳಿಗೆ ಅರ್ಜಿ ಸಲ್ಲಿಸಿದ್ದರು. ಮಗುವಿನ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಮರುಗಿದ ಮುಖ್ಯಮಂತ್ರಿಗಳು ನೆರವು ನೀಡುವ ಅಭಯ ನೀಡಿದರು. ನೆಲಮಂಗಲದ ಕ್ಯಾನ್ಸರ್ ರೋಗಿ ಚೌಡೇಶ್ವರಿಗೆ ಶಸ್ತ್ರಚಿಕಿತ್ಸೆಗೆ ಆರ್ಥಿಕ ನೆರವಿನ ಅಗತ್ಯವಿದ್ದು, ಆರ್ಥಿಕ ನೆರವು ಕೋರಿ ಮನವಿ ಸಲ್ಲಿಸಿದರು. ತಾವು ಸ್ವೀಕರಿಸಿದ ಮನವಿಯನ್ನು ಮುಖ್ಯಮಂತ್ರಿಗಳು ಪರಿಹಾರ ನಿಧಿ ಶಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಇದನ್ನೂ ಓದಿ: ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಸಿಐಡಿ ತನಿಖೆಗೆ
ಮೈಸೂರು ಸರ್ಕಾರಿ ಆಯುರ್ವೇದ ಕಾಲೇಜಿನ ರಾಜೇಶ್ ಎನ್. ಅವರು ಕೆಲಸ ಕಾಯಂಗೊಳಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿಗಳು ಈ ಕುರಿತು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಶರಣ ಬಸವ ಕುಮಾರ್ ಅವರಿಗೆ ಎರಡೂ ಕಣ್ಣುಗಳು ಕಾಣದಾಗಿದ್ದು ಸ್ವಂತ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಕೋರಿದರು. ಸಮಸ್ಯೆ ಆಲಿಸಿದ ಮುಖ್ಯ ಮಂತ್ರಿಗಳು ಪರಿಹಾರ ನಿಧಿಯಿಂದ ನೆರವು ನೀಡುವುದಾಗಿ ಅಭಯವನ್ನಿತ್ತರು. ಬೆಂಗಳೂರಿನ ಮಹಾಭೋದಿ ಸಂಶೋಧನಾ ಕೇಂದ್ರ ಇವರು ಬೌದ್ಧ ಜನಾಂಗದ ಆಧ್ಯಾತ್ಮಿಕ ಗ್ರಂಥಾಲಯದ ನವೀಕರಣಕ್ಕಾಗಿ 20 ಲಕ್ಷ ರೂ. ಅನುದಾನ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬೆಂಗಳೂರಿನ ಮಹಾಬೋಧಿ ಲುಂಬಿನಿ ಬುದ್ಧ ವಿಹಾರ ಸಂಸ್ಥೆಯವರು 2024-25 ನೇ ಆಯವ್ಯಯದಲ್ಲಿ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ನೀಡಿ, ಬೌದ್ಧ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸುವುದಾಗಿ ಭರವಸೆ ನೀಡಿದರು. ಬೆಳಗಾವಿ ಜಿಲ್ಲೆಯ ಸುರೇಶ್ ತುಕಾರಾಂ ಫೋಂಡೆ ತಮ್ಮ ಜಮೀನಿನಲ್ಲಿ ದೀಪಕ್ ಪಾಟೀಲ್ ಎಂಬುವರು ಮಣ್ಣು ತೆಗೆತ್ತಿಯುದ್ದು, ಕಳವು ಪ್ರಕರಣ ದಾಖಲಿಸಿಲ್ಲ ಎಂದು ದೂರಿದರು. ಸ್ಥಳದಲ್ಲಿಯೇ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪ್ರಕರಣ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ದಯಾನಂದ್ ಅವರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸ್ಥಳದಲ್ಲಿಯೇ ಮಾತನಾಡಿ ಕ್ರಮ ವಹಿಸಿಲು ಸೂಚಿಸಿದರು. ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ನಾಗರಾಜಯ್ಯ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಶಿರಾಸಲ್ಲಿ ರೂಢಿದಾರಿಯನ್ನು ಕತ್ತರಿಸಿರುವುದರಿಂದ 5 ಕಿ.ಮೀ ಬಳಸಿಕೊಂಡು ಓಡಾಡಬೇಕಿದೆ. ಇದನ್ನು ಸರಿಪಡಿಸುವಂತೆ ಕೋರಿದರು. ಅರ್ಜಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
10 ಲಕ್ಷ ರೂ. ಪರಿಹಾರ ಘೋಷಣೆ
ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ. ಪರಿಹಾರವನ್ನ ಸಿಎಂ ಘೋಷಿಸಿದರು. ರಾಮನಗರ ಜಿಲ್ಲೆಯ ವಿಜಯಕುಮಾರ್ ಬಿನ್ ನರಸಿಂಹಮೂರ್ತಿ ಎಂಬವರಿಗೆ ಕಿಡ್ನಿ ಕಸಿ ಚಿಕಿತ್ಸೆಗಾಗಿ 4 ಲಕ್ಷ ರೂ. ಧನಸಹಾಯವನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್ ಬೋನ್ ಮ್ಯಾರೋ ಕಸಿಗಾಗಿ 4 ಲಕ್ಷ ರೂ. ಧನಸಹಾಯವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಮಂಜೂರು ಮಾಡಿದರು. ತುಮಕೂರು ಜಿಲ್ಲೆಯ 8 ವರ್ಷದ ಶಾಂಭವಿ ಎಂಬ ಮಗುವಿಗೆ ಶ್ರವಣ ಸಾಧನಕ್ಕಾಗಿ 50 ಸಾವಿರ ರೂ. ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು. ಬೆಂಗಳೂರಿನ ನೂರ್ ಫಾತಿಮಾ ಬಿನ್ ಇಬ್ರಾಹಿಂ ಇವರಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಕಝಾಕಿಸ್ಥಾನದಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸಕ್ಕಾಗಿ 10 ಲಕ್ಷ ರೂ. ಮಂಜೂರಾತಿ ಪತ್ರವನ್ನು ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯ ತಂದೆಗೆ ಹಸ್ತಾಂತರ ಮಾಡಿದರು. ಇದನ್ನೂ ಓದಿ: ಮೋದಿ ಒಬಿಸಿಯಲ್ಲಿ ಹುಟ್ಟಿಲ್ಲ, ಜನರ ದಾರಿ ತಪ್ಪಿಸುತ್ತಿದ್ದಾರೆ: ರಾಹುಲ್ ಗಾಂಧಿ