– ಸಮಯ ಪ್ರಜ್ಞೆ ಮೆರೆದ ಬಾಲಕ
– ಅಪಘಾತದ ಬಳಿಕ ಚಾಲಕ ಪರಾರಿ
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಖಾಸಗಿ ಬಸ್ 15 ಅಡಿ ಆಳದ ವಿಸಿ ನಾಲೆಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿ 35್ಕೂ ಜನರು ಸಾವನ್ನಪ್ಪಿದ್ದಾರೆ. ಪಂಚಲಿಗೇಶ್ವರ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕ ಲೋಹಿತ್ ಪವಾಡ ಸದೃಶವಾಗಿ ಬದುಕುಳಿದಿದ್ದಾನೆ. ಬದುಕುಳಿದ ವಿದ್ಯಾರ್ಥಿ ಕೂಡಲೇ ನೆರೆಯ ಗ್ರಾಮಸ್ಥರಿಗೆ ಮಾಹಿತಿ ತಲುಪಿಸಿದ್ದಾನೆ. ವಿಷಯ ತಿಳಿದ ಗ್ರಾಮಸ್ಥರು ತಮ್ಮ ಹಗ್ಗದ ಸಹಾಯದಿಂದ ರಕ್ಷಣೆಗೆ ಮುಂದಾಗಿದ್ದಾರೆ.
ಗ್ರಾಮಸ್ಥರು ಘಟನಾ ಸ್ಥಳಕ್ಕೆ ತಲುಪುವಷ್ಟರಲ್ಲಿ ಬಸ್ ಸಂಪೂರ್ಣ ನೀರಿನಲ್ಲಿ ಮುಳುಗಡೆ ಆಗಿತ್ತು. ಅಪಘಾತಕ್ಕೊಳಗಾದ ಬಸ್ ಪ್ರತಿನಿತ್ಯ ಎರಡು ಬಾರಿ ಸಂಚರಿಸುತ್ತಿತ್ತು. ಮಂಡ್ಯದಲ್ಲಿ ಈ ರೀತಿಯ ಘಟನೆಗಳು ಪದೇ ಪದೇ ಮರಕುಳಿಸುತ್ತಿದ್ದು, ಸರ್ಕಾರದ ರಸ್ತೆ ಅಗಲೀಕರಣ ಮಾಡಬೇಕಿತ್ತು ಎಂಬ ಮಾತುಗಳು ಕೇಳಿ ಬರುತ್ತಿವೆ.
Advertisement
Advertisement
ಅಪಘಾತ ನಡೆದಿದ್ದು ಹೇಗೆ?
ಬಸ್ ನಲ್ಲಿ 35ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂಬ ಅಂಕಿ ಅಂಶಗಳು ಲಭ್ಯವಾಗಿವೆ. ಬಸ್ ಉಲ್ಟಾ ಅಂದ್ರೆ ಬಾಗಿಲು ಕೆಳಗಡೆ ಆಗಿ ಬಿದ್ದಿದ್ದರಿಂದ ಪ್ರಯಾಣಿಕರು ಹೊರ ಬರಲಾರದೇ ಉಸಿರುಗಟ್ಟಿ ಸಾವನ್ನಪ್ಪಿರುವ ಸಾಧ್ಯತೆಗಳಿವೆ.
Advertisement
ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ತಲುಪಿದ್ದು, ಕ್ರೇನ್ ಮೂಲಕ ಬಸ್ ಮೇಲೆತ್ತುವ ಪ್ರಯತ್ನ ಮಾಡಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಿಎಸ್ ಪುಟ್ಟರಾಜು ಅಪಘಾತ ನಡೆದ ಸ್ಥಳ ತಲುಪಿದ್ದು, ಕುಟುಂಬಸ್ಥರ ಆಕ್ರಂದನ ನೋಡಿ ಕಣ್ಣೀರು ಹಾಕಿದ್ದಾರೆ. ಗ್ರಾಮಸ್ಥರು ಇದೂವರೆಗೂ 20ಕ್ಕೂ ಅಧಿಕ ಶವಗಳನ್ನು ಹೊರ ತೆಗೆದಿದ್ದಾರೆ ಎಂಬ ಮಾಹಿತಿಗಳು ಸದ್ಯಕ್ಕೆ ಲಭ್ಯವಾಗುತ್ತಿವೆ. ಆದರೆ ಬಸ್ ನಲ್ಲಿ ಎಷ್ಟು ಜನರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿಲ್ಲ.
Advertisement
https://www.youtube.com/watch?v=lMlJXB3wtng
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv