ರಾಮನಗರ: ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಫುಲ್ ಅಲರ್ಟ್ ಆಗಿರುವ ಚುನಾವಣಾಧಿಕಾರಿಗಳು ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಕೋಟಿ ಕೋಟಿ ರೂ. ಬೆಲೆ ಬಾಳುವ ಚಿನ್ನ, ವಜ್ರ ಆಭರಣವನ್ನು ಜಪ್ತಿ ಮಾಡಿದ್ದಾರೆ. ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ (Gold Jewelry), ಕಚ್ಚಾ ಚಿನ್ನ ಹಾಗೂ ವಜ್ರಗಳನ್ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
Advertisement
ರಾಮನಗರದ ಹೆಜ್ವಾಲ ಚೆಕ್‌ಪೋಸ್ಟ್ (Ramanagara Hejwala Checkpost) ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ, 30 ಕೆಜಿಗೂ ಹೆಚ್ಚು ಚಿನ್ನ, 10 ಕೆಜಿಯಷ್ಟು ಬೆಳ್ಳಿಯನ್ನ ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಬಾಡೂಟ ವಶಕ್ಕೆ ಪಡೆದ FST ಟೀಂ- ರಸ್ತೆಬದಿ ಚೆಲ್ಲಿದ ಊಟವನ್ನೇ ತಿಂದ ಕೆಲವರು!
Advertisement
ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಮಲಬಾರ್ ಗೋಲ್ಡ್ & ಡೈಮಂಡ್ ಕಂಪನಿಗೆ ಸೇರಿದ್ದು ಎನ್ನಲಾದ ವಾಹನದಲ್ಲಿ ಚಿನ್ನ, ಬೆಳ್ಳಿ ಪತ್ತೆಯಾಗಿದೆ. ಸೂಕ್ತ ದಾಖಲೆ ಇಲ್ಲದಿದ್ದರಿಂದ ಅಧಿಕಾರಿಗಳು ಚಿನ್ನವನ್ನ ಜಪ್ತಿ ಮಾಡಿದ್ದಾರೆ. ಸೂಕ್ತ ದಾಖಲೆ ತೋರಿಸಿ, ಹಿಂಪಡೆದುಕೊಳ್ಳುವಂತೆ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Bengaluru: ಫ್ಲೈಓವರ್ ಮೇಲಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆ ಗುತ್ತಿಗೆ ನೌಕರ ಆತ್ಮಹತ್ಯೆ!
Advertisement
Advertisement
ದಾವಣಗೆರೆಯಲ್ಲಿ 12.50 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸೀಜ್:
ಮತ್ತೊಂದು ಪ್ರಕರಣದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 12.50 ಕೋಟಿ ರೂ. ಮೌಲ್ಯದ ಚಿನ್ನ ಹಾಗೂ ವಜ್ರವನ್ನು ದಾವಣಗೆರೆಯ ನಗರದ ಲೋಕಿಕೆರೆ ಚೆಕ್‌ಪೋಸ್ಟ್ ಬಳಿ ವಶಕ್ಕೆ ಪಡೆದಿದ್ದಾರೆ. ವಿವಿಧ ಆಭರಣ ಅಂಗಡಿಗಳಿಗೆ ಸಾಗಿಸುತ್ತಿದ್ದ ಚಿನ್ನಾಭರಣವನ್ನು ಸೂಕ್ತ ದಾಖಲೆಗಳಿಲ್ಲದ ಕಾರಣ ವಶಕ್ಕೆ ಪಡೆಯಲಾಗಿದೆ. ಚುನಾವಣಾ ಅಧಿಕಾರಿ ರೇಣುಕಾ, ಕಮರ್ಷಿಯಲ್ ಟ್ಯಾಕ್ಸ್ ನ ಇಲಾಖೆ ಉಪ ಆಯುಕ್ತ ಮಂಜುನಾಥ್ ನೇತೃತ್ವದಲ್ಲಿ ಜಪ್ತಿ ಮಾಡಲಾಗಿದೆ.