ಚಿತ್ರದುರ್ಗ: ಮೃತ ಸನ್ಯಾಸಿ (Monk) ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಇದೀಗ ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಹೌದು. ಚಿತ್ರದುರ್ಗ (Chitradurga) ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ನಿವಾಸಿ ಗಂಗಾಧರ ಶಾಸ್ತ್ರಿ (70) ವಾರದ ಹಿಂದೆ ಮೃತಪಟ್ಟಿದ್ದರು. ಇದೀಗ ಇವರ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ.
ಇವರು ಶಾಸ್ತ್ರ ಹೇಳುವುದು, ಶುಭ ಕಾರ್ಯದ ಪೂಜೆ ಮಾಡಿಸುತ್ತಿದ್ದರು. 16 ಎಕರೆ ಜಮೀನಿದ್ದು 4 ಎಕರೆ ತೆಂಗಿನ ತೋಟ, ಗದ್ದೆಯನ್ನು ಹೊಂದಿದ್ದರು. ಭಕ್ತರಿಂದ ಬಂದ ಕಾಣಿಕೆ ಹಣವೇ 46 ಸಾವಿರ ರೂ. ಹೆಚ್ಚಿದೆ. ಒಟ್ಟಿನಲ್ಲಿ ಇದೀಗ ಕೃಷಿ ಮತ್ತಿತರೆ ಆದಾಯದಿಂದ ಬಂದ 30 ಲಕ್ಷಕ್ಕೂ ಅಧಿಕ ಹಣ ಪತ್ತೆಯಾಗಿದೆ.
2 ದಿನಗಳ ಹಿಂದೆ ಶಾಸ್ತ್ರಿ ಮನೆ ಪರಿಶೀಲಿಸಿದಾಗ ಹಣ ಪತ್ತೆಯಾಗಿದ್ದು, ಭಕ್ತರು ಶಾಕ್ ಆಗಿದ್ದಾರೆ. ಒಂಟಿಯಾಗಿ ಬದುಕು ಸವೆಸಿದ್ದ ಶಾಸ್ತ್ರಿಯವರು ಮನೆಯ ವಿವಿಧೆಡೆ ಹಣ ಇರಿಸಿದ್ದರು. ಇದನ್ನೂ ಓದಿ: ಅಕ್ರಮ ಆಸ್ತಿ ಕೇಸ್; ಕೆ.ಆರ್. ಪುರಂ ತಹಶೀಲ್ದಾರ್ ಸಹೋದರ ಸೇರಿ ನಾಲ್ವರಿಗೆ ಲೋಕಾಯುಕ್ತ ನೋಟಿಸ್
ಸದ್ಯ ಜುಲೈ 7ಕ್ಕೆ ಭಕ್ತರ ಸಭೆ ಕರೆದು ಸಮಿತಿ ರಚಿಸಿ ಜಮೀನಿನಲ್ಲಿ ಗಂಗಾಧರ ಶಾಸ್ತ್ರಿ ಗದ್ದುಗೆ ನಿರ್ಮಿಸಲು ಸ್ಥಳೀಯರು ನಿರ್ಧಾರ ಮಾಡಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]