ತುಮಕೂರು: ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Bengaluru’s 2nd Airport) ನಿರ್ಮಾಣ ವಿಚಾರವಾಗಿ ಕನಕಪುರದ ಹಾರೋಹಳ್ಳಿ ಹಾಗೂ ನೆಲಮಂಗಲ ಭಾಗದಲ್ಲಿ ಎರಡನೇ ಏರ್‌ಪೋರ್ಟ್ ನಿರ್ಮಾಣಕ್ಕೆ ಜಾಗ ಗುರುತಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಬಯಲುಸೀಮೆ, ಉತ್ತರ ಕರ್ನಾಟಕ ಭಾಗದ ಕೆಲವು ಶಾಸಕರು ಸಿಎಂಗೆ ಮನವಿ ಮಾಡಿದ್ದಾರೆ.
ತುಮಕೂರು (Tumakuru) ಜಿಲ್ಲೆಯ ಶಿರಾದಲ್ಲಿ (Sira) ಎರಡನೇ ಏರ್‌ಪೋರ್ಟ್ ನಿರ್ಮಾಣ ಮಾಡಿ ಎಂದು 30 ಕ್ಕೂ ಹೆಚ್ಚು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಚೆಕ್ ಬೌನ್ಸ್ ಕೇಸ್ – ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್
ದೆಹಲಿಯ ಸರ್ಕಾರದ ಪ್ರತಿನಿಧಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಶಾಸಕರು ಮನವಿ ಮಾಡಿದ್ದಾರೆ. ಪಕ್ಷಾತೀತವಾಗಿ ವಿರೋಧ ವ್ಯಕ್ತಪಡಿಸಿ ಮೂವತ್ತಕ್ಕೂ ಹೆಚ್ಚು ಶಾಸಕರು ಪತ್ರ ಬರೆದಿದ್ದಾರೆ. ಶಿರಾದಲ್ಲಿ ಏರ್‌ಪೋರ್ಟ್ ನಿರ್ಮಾಣ ಮಾಡುವುದರಿಂದ ಬಯಲುಸೀಮೆ, ಉತ್ತರ ಕರ್ನಾಟಕದ ಭಾಗಕ್ಕೆ ಹೆಚ್ಚು ಅನುಕೂಲ ಆಗಲಿದೆ. ಶಿರಾದಲ್ಲಿ ಚೆನ್ನೈ-ಮುಂಬೈ ಹೆದ್ದಾರಿ ಹಾದು ಹೋಗಿದೆ. ಹೆಚ್‌ಎಎಲ್‌ನಂತಹ ರಕ್ಷಣಾ ಸಂಸ್ಥೆ ಇದೆ. ಅತಿದೊಡ್ಡ ವಸಂತನರಸಾಪುರ ಕೈಗಾರಿಕಾ ಪ್ರದೇಶವಿದೆ. ಶೀಘ್ರದಲ್ಲೇ ಜಪಾನ್ ಟೌನ್‌ಶಿಪ್ ಕೂಡ ನಿರ್ಮಾಣ ಆಗ್ತಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಆಗುತ್ತಿದೆ. ಎತ್ತಿನಹೊಳೆ, ಭದ್ರಾ ಮೇಲ್ದಂಡೆ, ಹೇಮಾವತಿ ನೀರಾವರಿ ಸೌಲಭ್ಯ ಇದೆ. ತುಮಕೂರು-ರಾಯದುರ್ಗ ರೈಲ್ವೇ ಮಾರ್ಗ ಕೂಡ ಹಾದು ಹೋಗಲಿದೆ ಎಂದು ಮನವರಿಕೆ ಮಾಡಿದ್ದಾರೆ.
ಶಿರಾದಲ್ಲಿ ಏರ್‌ಪೋರ್ಟ್ ನಿರ್ಮಾಣವಾದ್ರೆ ಬೆಂಗಳೂರಿನಲ್ಲಿ ಅರ್ಧದಷ್ಟು ಟ್ರಾಫಿಕ್ ದಟ್ಟಣೆ ಕಡಿಮೆ ಆಗಲಿದೆ. ಹೀಗಾಗಿ, ಶಿರಾದಲ್ಲೇ ಎರಡನೇ ಏರ್‌ಪೋರ್ಟ್ ನಿರ್ಮಾಣ ಮಾಡಿ ಎಂದು ಮನವಿ ಸಲ್ಲಿಸಿದ್ದಾರೆ. ಈ ಮೂಲಕ ಹಾರೋಹಳ್ಳಿ ಅಥವಾ ನೆಲಮಂಗಲದಲ್ಲಿ ಏರ್‌ಪೋರ್ಟ್ ನಿರ್ಮಾಣಕ್ಕೆ ಬಯಲುಸೀಮೆ, ಉತ್ತರ ಕರ್ನಾಟಕ ಭಾಗದ ಕೆಲವು ಶಾಸಕರ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ – ಯತ್ನಾಳ್ ವಿರುದ್ಧ ಎಫ್‍ಐಆರ್