ಬೆಳಗಾವಿ: ಮಹಾರಾಷ್ಟ್ರದಿಂದ (Maharashtra) ಬೆಳಗಾವಿಗೆ (Belagavi) ಬರುತ್ತಿದ್ದ 300ಕ್ಕೂ ಹೆಚ್ಚು ಬಸ್‌ಗಳು (Bus) ತಾತ್ಕಾಲಿಕ ಸ್ಥಗಿತವಾಗಿದ್ದು ಅಹಿತಕರ ಘಟನೆಗಳು ನಡೆಯದಂತೆ ನಗರ ಕೇಂದ್ರ ಬಸ್ ನಿಲ್ದಾಣದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ಮಹಾರಾಷ್ಟ್ರದ ಪುಂಡರು ಇಂದು ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿದಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮಹಾರಾಷ್ಟ್ರದ ಬಸ್‌ಗಳಿಗೂ ಕಪ್ಪು ಮಸಿ ಬಳಿಯುವ ಭೀತಿಯ ಹಿನ್ನೆಲೆಯಲ್ಲಿ ನಗರ ಕೇಂದ್ರ ಬಸ್ ನಿಲ್ದಾಣದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
Advertisement
Advertisement
ಇತ್ತ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುತ್ತಿದ್ದ 300ಕ್ಕೂ ಅಧಿಕ ಬಸ್‌ಗಳ ಸಂಚಾರವನ್ನು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಥಗಿತಗೊಳಿಸಿ ಆದೇಶ ಮಾಡಿದೆ. ಮಹಾರಾಷ್ಟ್ರದಿಂದ ನಿತ್ಯ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ರಾಜ್ಯದ ಹಲವು ಭಾಗಗಳಿಗೆ ಮಹಾರಾಷ್ಟ್ರ (MSRTC) ಬಸ್‌ಗಳು ಸಂಚಾರ ಮಾಡುತ್ತವೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಎಂದಿನಂತೆ ಕರ್ನಾಟಕ ಸಾರಿಗೆ ಬಸ್‌ಗಳು ತೆರಳುತ್ತಿವೆ. ಇದನ್ನೂ ಓದಿ: ಆಟೋರಾಜನ ಕೈಹಿಡಿದ ಬೆಲ್ಜಿಯಂ ಕನ್ಯೆ – ಹಿಂದೂ ಸಂಪ್ರದಾಯದಂತೆ ಅದ್ದೂರಿ ಮದುವೆ
Advertisement
Advertisement
ಕನ್ನಡಪರ ಹೋರಾಟಗಾರರ ಬೆನ್ನು ಬಿದ್ದ ಪೊಲೀಸರು:
ಮಹಾರಾಷ್ಟ್ರದ ಬಸ್‌ಗಳಿಗೂ ಕಪ್ಪು ಮಸಿ ಬಳಿಯುವ ಭೀತಿ ಹಿನ್ನೆಲೆ ಬೆಳಗಾವಿಯಲ್ಲಿ ಪೊಲೀಸರು ಕನ್ನಡಪರ ಹೋರಾಟಗಾರರ ಬೆನ್ನು ಬಿದ್ದಿದ್ದಾರೆ. ಮಹಾರಾಷ್ಟ್ರದ ಬಸ್‌ಗಳಿಗೆ ಮಸಿ ಬಳಿಯದಂತೆ ಕನ್ನಡಪರ ಹೋರಾಟಗಾರರಿಗೆ ಪೊಲೀಸರು ವಾರ್ನಿಂಗ್ ಮಾಡುತ್ತಿದ್ದಾರೆ. ಎರಡೂ ರಾಜ್ಯಗಳ ಜನಸಂಚಾರಕ್ಕೆ ಯಾವುದೇ ರೀತಿಯ ನಿರ್ಬಂಧ ಹೇರದಂತೆ ಮತ್ತು ಕಾನೂನು ಕೈಗೆತ್ತಿಕೊಳ್ಳದಂತೆ ತಾಕೀತು ಮಾಡಲಾಗಿದೆ. ಕರವೇ ಶಿವರಾಮೇಗೌಡ ಬಣ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕುಡಿ ಸೇರಿದಂತೆ ಹಲವರಿಗೆ ಪೊಲೀಸರು ವಾರ್ನ್ ಮಾಡಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಬೆಲ್ಟ್, ದೊಣ್ಣೆಯಿಂದ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ – ಶಾಲಾ ನಿರ್ದೇಶಕ ವಿರುದ್ಧ ದೂರು