– 13 ಲಕ್ಷಕ್ಕೂ ಅಧಿಕ ಮಂದಿ ಗುಣಮುಖ
– ಅಮೆರಿಕ ಒಂದರಲ್ಲೇ 78 ಸಾವಿರ ಮಂದಿ ಸಾವು
ವಾಷಿಂಗ್ಟನ್: ಇಡೀ ವಿಶ್ವವನ್ನೇ ಕಾಡುತ್ತಿರುವ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿದೆ. ವಿಶ್ವವ್ಯಾಪಿ ಸೋಂಕಿತರ ಸಂಖ್ಯೆ 40.29 ಲಕ್ಷಕ್ಕೆ ಏರಿದ್ದು, ಮಹಾಮಾರಿಗೆ ಬಲಿಯಾದವರ ಸಂಖ್ಯೆ 2,76,484ಕ್ಕೆ ತಲುಪಿದೆ.
ಜಗತ್ತಿನಾದ್ಯಂತ ಇರುವ ಸೋಂಕಿತರ ಪೈಕಿ ಈವರೆಗೆ 13,94,289 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 212 ರಾಷ್ಟ್ರಗಳು ಹಾಗೂ ಪ್ರಾಂತ್ಯದಲ್ಲಿ ಹಬ್ಬಿರುವ ಕೊರೊನಾ ತನ್ನ ರಣಕೇಕೆ ಮುಂದುವರೆಸಿದೆ. ಅದರಲ್ಲೂ ಅಮೆರಿಕದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 13,22,164ಕ್ಕೆ ಏರಿದ್ದು, 78,616 ಮಂದಿಯನ್ನು ಕಿಲ್ಲರ್ ಕೊರೊನಾ ಬಲಿಪಡೆದಿದೆ. ಹಾಗೆಯೇ ಈವರಗೆ 2,23,749 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
Advertisement
Advertisement
ಕೊರೊನಾ ವೈರಸ್ ಅತೀ ಹೆಚ್ಚು ಹರಡಿರುವ ದೇಶಗಳ ಪಟ್ಟಿಯಲ್ಲಿ ಸ್ಪೈನ್ 2ನೇ ಸ್ಥಾನದಲ್ಲಿದ್ದು, ಇಲ್ಲಿ 2,60,117 ಮಂದಿಗೆ ಸೋಂಕು ತಗುಲಿದೆ. ಈವರೆಗೆ 26,299 ಮಂದಿ ಸಾವನ್ನಪ್ಪಿದ್ದು, 1,68,408 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇಟಲಿಯಲ್ಲಿ ಸೋಂಕಿತರ ಸಂಖ್ಯೆ 2,17,185ಕ್ಕೆ ತಲುಪಿದೆ. ಈವರೆಗೆ 99,023 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 30,201 ಮಂದಿ ಜೀವ ಕಳೆದುಕೊಂಡಿದ್ದಾರೆ. ಬ್ರಿಟನ್‍ನಲ್ಲೂ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 2,11,364ಕ್ಕೆ ತಲುಪಿದ್ದು, 31,241 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
Advertisement
Advertisement
ಭಾರತದಲ್ಲಿಯೂ ಕೊರೊನಾ ಹಾವಳಿ ದಿನೇ ದಿನೇ ಹೆಚ್ಚಾಗುಲೇ ಇದ್ದು, 59,765 ಮಂದಿಗೆ ಈವರೆಗೆ ಸೋಂಕು ತಗುಲಿದ್ದು, 1,986 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. 17,897 ಮಂದಿ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಹಾಗೆಯೇ ಪಾಕಿಸ್ತಾನದಲ್ಲಿ 27,474 ಮಂದಿ ಸೋಂಕಿಗೆ ತುತ್ತಾಗಿದ್ದು, 7,756 ಮಂದಿ ಸೋಂಕಿನಿಂದ ಗುಣವಾಗಿ, 618 ಮಂದಿ ಸಾವನ್ನಪ್ಪಿದ್ದಾರೆ.