ಅನ್ನ ಪ್ರಸಾದ ಸೇವಿಸಿ ಮಕ್ಕಳೂ ಸೇರಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Public TV
0 Min Read
DWD 1

ಧಾರವಾಡ: ಜಾತ್ರೆಯಲ್ಲಿ ಅನ್ನ ಪ್ರಸಾದ ಸೇವಿಸಿದ 60 ಕ್ಜೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ದಾಸ್ರಿಕೊಪ್ಪ ಗ್ರಾಮದಲ್ಲಿ ಶುಕ್ರವಾರ ಮೈಲಾರಲಿಂಗ ದೇವರ ಜಾತ್ರೆ ಹಿನ್ನೆಲೆಯಲ್ಲಿ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಈ ಸಮಯದಲ್ಲಿ ಅನ್ನ ಪ್ರಸಾದ ಸೇವಿಸಿದ 60 ಜನರು ಅಸ್ವಸ್ಥರಾಗಿದ್ದಾರೆ.

ಅಸ್ವಸ್ಥರಲ್ಲಿ ಚಿಕ್ಕ ಮಕ್ಕಳಿಗೆ ವಾಂತಿ ಬೇಧಿ ಆರಂಭವಾಗಿದೆ. ಸದ್ಯ ಅಸ್ವಸ್ಥಗೊಂಡವರನ್ನು ಕಲಘಟಗಿ ತಾಲೂಕಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕೆಲವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

DWD 5

 

DWD 3

DWD 2 1

Share This Article
Leave a Comment

Leave a Reply

Your email address will not be published. Required fields are marked *