ದಾವಣಗೆರೆ: ದೊಡ್ಮನೆ ಹುಡುಗ, ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಂದ ಪ್ರೇರಣೆ ಪಡೆದು ಒಂದೇ ಗ್ರಾಮದ 60ಕ್ಕೂ ಹೆಚ್ಚು ಮಂದಿ ನೇತ್ರದಾನ ಮಾಡಲು ಮುಂದಾಗಿದ್ದಾರೆ.
ದಾವಣಗೆರೆ ತಾಲೂಕಿನ ಚಟ್ಟೋಬನಹಳ್ಳಿ ತಾಂಡದಲ್ಲಿ ನೆಚ್ಚಿನ ನಟ ಅಪ್ಪುಗೆ ಗೌರವ ಸಲ್ಲಿಸಲು ಬಂಜಾರ ಸಮುದಾಯದ 60ಕ್ಕೂ ಅಧಿಕ ಯುವಕರು ನೇತ್ರದಾನ ಮಾಡಲು ನೋಂದಯಿಸಿ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ನಾಳೆ ಪುನೀತ್ 11ನೇ ದಿನದ ಪುಣ್ಯಾರಾಧನೆ – ಅಪ್ಪು ಕುಟುಂಬಸ್ಥರಿಂದ ಸಿದ್ಧತೆ
ಪುನೀತ್ ಅಗಲಿಕೆಯಿಂದ ಒಂದು ವಾರದಿಂದ ಶೋಕ ಸಾಗರದಲ್ಲಿ ಮುಳುಗಿದ್ದ ಚಟ್ಟೋಬನಹಳ್ಳಿ ಗ್ರಾಮಸ್ಥರು, ಅವರ ಆದರ್ಶವನ್ನು ಮೈಗೂಡಿಸಿಕೊಂಡು ಅವರ ಹಾದಿಯಲ್ಲಿಯಲ್ಲಿಯೇ ನೇತ್ರದಾನ ಮಾಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ನೇತ್ರದಾನಕ್ಕೆ ಸ್ಫೂರ್ತಿಯಾದ ” ರಾಜರತ್ನ” – ಅಪ್ಪು ಬಳಿಕ ಹೆಚ್ಚಾಗ್ತಿದೆ ನೇತ್ರದಾನಿಗಳ ಸಂಖ್ಯೆ
ಅಪ್ಪು ಅನೇಕ ಜನರಿಗೆ ಸಹಾಯ ಮಾಡಿದ್ದಲ್ಲದೇ ಕಣ್ಣು ದಾನ ಮಾಡಿದ್ದರು. ಅವರು ನೇತ್ರದಾನ ಮಾಡಿದಕ್ಕೆ ಅವರ ದಾರಿಯಲ್ಲಿಯೇ ಅವರ ಅಭಿಮಾನಿಗಳು ಕಣ್ಣನ್ನು ದಾನ ಮಾಡುವ ಮೂಲಕ ಬೇರೆಯವರಿಗೆ ಆದರ್ಶರಾಗಿದ್ದಾರೆ. ಒಟ್ಟಾರೆ ಈ ಸಾಮಾಜಿಕ ಕಾರ್ಯ ಮಾಡುವ ಮೂಲಕ ಚಟ್ಟೋಬನಹಳ್ಳಿ ತಾಂಡ ರಾಜ್ಯಕ್ಕೆ ಮಾದರಿಯಾಗಿದೆ.