ಮುಂಬೈ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mumbai International Airport) ಇಬ್ಬರು ಪ್ರಯಾಣಿಕರನ್ನು ಬಂಧಿಸಿರುವ ಮುಂಬೈ ಪೊಲೀಸರು (Mumbai Police), ಬಂಧಿತರಿಂದ 7.69 ಕೋಟಿ ರೂ. ಮೌಲ್ಯದ 9487 ಗ್ರಾಂ (9.48 ಕೆಜಿ) ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಐಎಕ್ಸ್ 1762 ವಿಮಾನದಲ್ಲಿ ಜೈಪುರದಿಂದ (Jaipur) ಮುಂಬೈಗೆ (Mumbai) ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಪೊಲೀಸರು ಬಂಧಿಸಿದ್ದು, 9487 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.ಇದನ್ನೂ ಓದಿ: ಕಲ್ಯಾಣಿಯಲ್ಲಿ ಈಜಲು ಹೋದ ಹಾಸ್ಟೆಲ್ ವಿದ್ಯಾರ್ಥಿ ಸಾವು
ಇಬ್ಬರೂ ಪ್ರಯಾಣಿಕರು ಸ್ವತಃ ಹೇಳಿಕೆಯನ್ನು ನೀಡಿದ್ದು, ಕಳ್ಳತನ ಮಾಡಿದ್ದ ಚಿನ್ನವನ್ನು ವಿಮಾನದಲ್ಲಿ ಬಚ್ಚಿಟ್ಟಿದ್ದೇವು ಎಂದು ಒಪ್ಪಿಕೊಂಡಿದ್ದಾರೆ. ಜೊತೆಗೆ ಇಬ್ಬರು ಪ್ರಯಾಣಿಕರು ನಕಲಿ ಗುರುತಿನ ಚೀಟಿ ಉಪಯೋಗಿಸಿ ಪ್ರಯಾಣ ಮಾಡುತ್ತಿರುವುದಾಗಿ ತಿಳಿದುಬಂದಿದೆ.
ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಮುಂಬೈ ಡಿಆರ್‌ಐ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ