KalaburagiLatestLeading NewsMain Post

ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ – ನೂರಾರು ಜನರು ಪೊಲೀಸ್ ವಶಕ್ಕೆ

ಕಲಬುರಗಿ: ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯ ನಿರ್ಮಾಣ ಮಾಡಬೇಕೆಂದು ಕಲ್ಯಾಣ ಕರ್ನಾಟಕ (Kalyana Karnataka) ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಪ್ರತ್ಯೇಕ ಧ್ವಜಾರೋಹಣ (Flag) ಮಾಡಲು ಯತ್ನಿಸಿದೆ.

ಕಲಬುರಗಿಯ (Kalaburagi) ಸರ್ಧಾರ್‌ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಮುಂದಾದ ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಸಚಿವ ದಿ. ಉಮೇಶ ಕತ್ತಿ ಹಾಗೂ ವೈಜನಾಥ ಪಾಟೀಲ್‌ರ ಭಾವಚಿತ್ರ ಮತ್ತು ಪ್ರತ್ಯೇಕ ರಾಜ್ಯದ ಧ್ವಜ ಹಿಡಿದು ಎಂ‌.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ನೂರಾರು ಜನ ಸೇರಿ ಹೋರಾಟ ನಡೆಸಿದ್ದರು.‌ ಕೋರ್ಟ್ ಮಾರ್ಗವಾಗಿ ಪಟೇಲ್ ವೃತ್ತಕ್ಕೆ ಧ್ವಜಾರೋಹಣ ಮಾಡಲು ಬರುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿದ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದರು. ಇದನ್ನೂ ಓದಿ: ಗಡಿಜಿಲ್ಲೆಯಲ್ಲಿ ಮಧ್ಯರಾತ್ರಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗಾಗಿ 371 ಜೆ ವಿದೇಯಕ ಜಾರಿಗೊಳಿಸಿದ್ದರೂ ರಾಜಕೀಯ ಇಚ್ಛಾಶಕ್ತಿ ಕೊರತೆ, ರಾಜ್ಯ ಸರ್ಕಾರದ ಮಲತಾಯಿ ಧೋರಣೆಯಿಂದ ಈ ಭಾಗದ ಪ್ರತಿಯೊಂದು ಕ್ಷೇತ್ರಕ್ಕೂ ಅನ್ಯಾಯ ಮುಂದುವರಿದಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಿಟ್ಟ ಹಣ ಪಕ್ಕದ ಜಿಲ್ಲೆಗಳಿಗೆ ಬಳಕೆ ಮಾಡಲಾಗ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಉದ್ಯೊಗ ನೇಮಕಾತಿ, ಮೀಸಲಾತಿ, ಮುಂಬಡ್ತಿ ವಿಷಯದಲ್ಲಿ ಕಡೆಗಣನೆ ಮಾಡಲಾಗುತ್ತಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನದಲ್ಲಿಯೂ ಈ ಭಾಗಕ್ಕೆ ಅನ್ಯಾಯವಾಗಿದೆ. ಪದೇಪದೆ ಈ ಭಾಗಕ್ಕೆ ರಾಜ್ಯ ಸರ್ಕಾರ ದ್ರೋಹ ಬಗೆಯುತ್ತಿದೆ. ನಮ್ಮ ಭಾಗದ ಸಮಗ್ರ ಅಭಿವೃದ್ಧಿಗಾಗಿ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯ ನೀಡಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ‘ಕರ್ನಾಟಕ ರತ್ನ’ ಪ್ರಶಸ್ತಿ ಪಡೆದ 9ನೇ ರತ್ನ ಪುನೀತ್ ರಾಜ್ ಕುಮಾರ್

Live Tv

Leave a Reply

Your email address will not be published. Required fields are marked *

Back to top button