ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯೇ ಮಳೆ (Rain) ಸುರಿದಿದೆ. ಯಶವಂತಪುರ , ಮಹಾಲಕ್ಷ್ಮಿ ಲೇಔಟ್ ಸುತ್ತಮುತ್ತ ಮಳೆಯಾಗಿದೆ.
ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಪರಿಣಾಮದಿಂದ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಮತ್ತು ನಾಳೆ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ದೇಶದ ಮೊದಲ ವರ್ಟಿಕಲ್ ಪಂಬನ್ ರೈಲ್ವೆ ಬ್ರಿಡ್ಜ್ – ಇದರ ವಿಶೇಷತೆಯೇನು?
- Advertisement
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
- Advertisement
ಹಾಸನ, ಮೈಸೂರು, ಚಿತ್ರದುರ್ಗ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ. ಇದನ್ನೂ ಓದಿ: ಮೋದಿ ನನ್ನ ಫ್ರೆಂಡ್ ಎನ್ನುತ್ತಲೇ ಭಾರತದ ವಸ್ತುಗಳಿಗೆ 26% ಪ್ರತಿ ಸುಂಕ ಘೋಷಿಸಿದ ಟ್ರಂಪ್