ರಬತ್: ಮೊರಾಕ್ಕೋ (Morocco Earhquake) ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಭೂಕಂಪಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 2,800 ಕ್ಕೆ ಏರಿಕೆಯಾಗಿದೆ.
ಕಳೆದ ಶುಕ್ರವಾರ 6.8 ತೀವ್ರತೆಯ ಭೂಕಂಪ ಸಂಭವಿಸಿ ಅಪಾರ ಸಾವು-ನೋವಾಗಿತ್ತು. ಬದುಕುಳಿದವರ ಪತ್ತೆಗಾಗಿ ದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಇದನ್ನೂ ಓದಿ: ಮೊರಾಕ್ಕೋ ಭೀಕರ ಭೂಕಂಪ – ಸಾವಿನ ಸಂಖ್ಯೆ 2012ಕ್ಕೆ ಏರಿಕೆ
- Advertisement 2-
- Advertisement 3-
ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಕತಾರ್‌ನ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ. ಭೂಕಂಪಕ್ಕೆ ಸಿಲುಕಿ 2,562 ಜನರು ಗಾಯಗೊಂಡಿದ್ದಾರೆ. ಮರ್ರಾಕೇಶ್‌ನಿಂದ 60 ಕಿ.ಮೀ. ದೂರದಲ್ಲಿರುವ ತಾಫೆಘಗ್ಟೆ ಎಂಬ ಪರ್ವತ ಹಳ್ಳಿಯಲ್ಲಿನ ಪ್ರತಿ ಕಟ್ಟಡವೂ ಭೂಕಂಪದಿಂದಾಗಿ ನಾಶವಾಗಿದೆ.
- Advertisement 4-
ಶುಕ್ರವಾರ ತಡರಾತ್ರಿ ಮಧ್ಯ ಮೊರಾಕ್ಕೋದಲ್ಲಿ (Morocco Earthquake) 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ನೆಲಸಮವಾಗಿ ಅಪಾರ ಸಾವು-ನೋವಾಗಿತ್ತು. ದುರಂತಕ್ಕೆ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ವಿಶ್ವ ನಾಯಕರು ವಿಷಾದ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಮೊರಾಕ್ಕೋದಲ್ಲಿ ಭೂಕಂಪ; ಮೃತರ ಸಂಖ್ಯೆ 820 ಕ್ಕೇರಿಕೆ
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ದುಃಖ ವ್ಯಕ್ತಪಡಿಸಿದ್ದರು. ಮೊರಾಕ್ಕೋಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದರು.
Web Stories