ಮುಂಬೈ: ರಾಜ್ಯದಲ್ಲಿರುವ ಎಲ್ಲಾ ಮಸೀದಿಗಳು ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಅನುಮತಿ ಪಡೆದುಕೊಳ್ಳುವಂತೆ ಜಮಿಯತ್-ಉಲಮಾ-ಇ-ಹಿಂದ್ ಘಟಕ ಸಲಹೆ ನೀಡಿದೆ.
ರಾಜ್ಯದ ಮಸೀದಿಗಳಲ್ಲಿ ಆಜಾನ್ ಬಳಕೆ ವಿಚಾರವಾಗಿ ಹಿಂದೂಪರ ಸಂಘಟನೆಗಳ ತೀವ್ರ ವಿರೋಧದ ನಡುವೆ ಈ ಸೂಚನೆ ನೀಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ಕೋರ್ಟ್ ಹೊರಡಿಸಿರುವ ಆದೇಶವನ್ನು ಅನುಷ್ಠಾನಗೊಳಿಸಲು ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವಾಲಯ ನಿರ್ಧರಿಸಿದೆ. ಇದನ್ನೂ ಓದಿ: 12 ರಾಜ್ಯಗಳಲ್ಲಿ ವಿದ್ಯುತ್ ಸಮಸ್ಯೆ: ಮಹಾರಾಷ್ಟ್ರ ಸಚಿವ
Advertisement
Advertisement
ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸಲು ಅನುಮತಿ ಪಡೆದಿರಬೇಕು ಎಂಬ ಮಾರ್ಗಸೂಚಿಯನ್ನು ಹೊರಡಿಸಲು ಸರ್ಕಾರ ಮುಂದಾಗಿದೆ.
Advertisement
ಈ ಕುರಿತು ಪ್ರತಿಕ್ರಿಯಿಸಿರುವ ಜಮಿಯತ್-ಉಲಮಾ-ಇ-ಹಿಂದ್ ಘಟಕದ ಕಾರ್ಯದರ್ಶಿ ಗುಲ್ಜರ್ ಅಜ್ಮಿ, ರಾಜ್ಯದಲ್ಲಿರುವ ಬಹುಪಾಲು ಮಸೀದಿಗಳು ಧ್ವನಿವರ್ಧಕ ಬಳಕೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದಿವೆ. ಅನುಮತಿ ಪಡೆಯದೇ ಇದ್ದರೆ ಮಸೀದಿಗಳು ಕೂಡಲೇ ಅನುಮತಿ ಪಡೆಯುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ
Advertisement
ರಾಜ್ಯದ ಪೊಲೀಸ್ ಇಲಾಖೆ ತುಂಬಾ ಸಹಕಾರ ನೀಡಿದ್ದಾರೆ. ಅನುಮತಿ ನೀಡುವಲ್ಲಿಯೂ ಪೊಲೀಸರ ಸಹಕಾರ ಅಗತ್ಯವಿದೆ ಎಂದು ಅಜ್ಮಿ ಅಭಿಪ್ರಾಯಪಟ್ಟಿದ್ದಾರೆ.
ಧ್ವನಿವರ್ಧಕಗಳ ಸಮಸ್ಯೆಯನ್ನು ನಿಭಾಯಿಸಲು ಮಹಾರಾಷ್ಟ್ರ ಸರ್ಕಾರವನ್ನು ಶ್ಲಾಘಿಸಿದ ಅಜ್ಮಿ ಅವರು, ರಾಜ್ಯ ಸರ್ಕಾರವು ಎಲ್ಲರಿಗೂ ನ್ಯಾಯ ಒದಗಿಸಲು ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋವಿಡ್ ಉಲ್ಬಣದಿಂದ ದೆಹಲಿಯಲ್ಲಿ ಶಾಲೆಗಳು ಬಂದ್? – ತಜ್ಞರ ಸಮಿತಿಯ ಸಲಹೆಗಳೇನು?
ಮೇ 3ರೊಳಗೆ ಮಸೀದಿಗಳಲ್ಲಿ ಧ್ವನಿವರ್ಧಕಗಳ ತೆರವಿಗೆ ರಾಜ್ಯ ಸರ್ಕಾರ ಕ್ರಮವಹಿಸಬೇಕು. ಇಲ್ಲವಾದಲ್ಲಿ ಮಸೀದಿ ಹೊರಗಡೆ ಧ್ವನಿವರ್ಧಕಗಳನ್ನು ಹಾಕಿ ಹನುಮಾನ್ ಚಾಲೀಸಾ ಪಠಿಸಲಾಗುವುದು ಎಂದು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.