ಲಕ್ನೋ: ದೇವಾಲಯಗಳ ಬಳಿ ಇರುವ ಮಸೀದಿಗಳನ್ನು (mosques) ಮುಸ್ಲಿಮರು ಸ್ವಯಂಪ್ರೇರಣೆಯಿಂದ ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸಚಿವ ಸಂಜಯ್ ನಿಶಾದ್ (Sanjay Nishad) ಹೇಳಿಕೆ ನೀಡಿದ್ದಾರೆ.
ರಾಮ ಮಂದಿರದಂತೆಯೇ (Ram Temple), ಮಸೀದಿಗಳನ್ನು ಸ್ವಯಂಪ್ರೇರಿತವಾಗಿ ಸ್ಥಳಾಂತರಿಸಬೇಕೆಂದು ನಾನು ಬಯಸುತ್ತೇನೆ. ಅಲ್ಲಿ ಯಾವುದೇ ತೊಂದರೆಯಿಲ್ಲದೆ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಮಸೀದಿಯನ್ನು ಬೇರೆ ಸ್ಥಳದಲ್ಲಿ ನಿರ್ಮಿಸಲಾಗುತ್ತಿದೆ. ಭಾರತೀಯ ಸಂಸ್ಕೃತಿಯ ಇತರ ಧರ್ಮಗಳು ಅವರು ಎಲ್ಲಿ ಬೇಕಾದರೂ ತಮ್ಮ ಪೂಜಾ ಸ್ಥಳಗಳನ್ನು ನಿರ್ಮಿಸಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿ ಜಿಲ್ಲೆಯಲ್ಲಿ 3 ಸ್ಕ್ರ್ಯಾಪಿಂಗ್ ಸೌಲಭ್ಯ : ಗಡ್ಕರಿ
Advertisement
Advertisement
ರಾಜ್ಯದಲ್ಲಿನ ಮದರಸಾಗಳ ಸಮೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಸಚಿವ ನಿಶಾದ್ ಸ್ವಾಗತಿಸಿದ್ದರು. ಭಯೋತ್ಪಾದಕರು ಮತ್ತು ಅಪರಾಧಿಗಳು ಮದರಸಾಗಳೊಂದಿಗೆ ಸಂಪರ್ಕ ಹೊಂದಿರುವುದು ಕಂಡುಬಂದಿದೆ ಎಂದು ಆರೋಪಿಸಿದ್ದರು. ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ರಾಜ್ಯವನ್ನು ಗಲಭೆ ಮುಕ್ತಗೊಳಿಸಿದ್ದಾರೆ ಎಂದು ಹೇಳಿದ್ದರು.
Advertisement
Advertisement
ಮೀನುಗಾರಿಕೆ ಸಚಿವರಾಗಿರುವ ನಿಶಾದ್ ಅವರು, 2022 ರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಓಯೋ ರೂಂಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ – ಆರೋಪಿಗಳ ಬಂಧನ