ನವದೆಹಲಿ: ಎಂ.ಎಸ್.ಧೋನಿ ನೇತೃತ್ವದ ಟೀಂ ಇಂಡಿಯಾ 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಉದ್ಘಾಟನಾ ಟಿ20 ವಿಶ್ವಕಪ್ ಆವೃತ್ತಿಯನ್ನು ಗೆದ್ದ ಬೀಗಿತ್ತು. ಈ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಾರಂಭವಾಗಿ ಕ್ರಿಕೆಟ್ ಅಭಿಮಾನಿಗಳಿಗಳಿಗೆ ಮತ್ತಷ್ಟು ರಂಗು ನೀಡಿತು. ಐಪಿಎಲ್ ದೇಶ ಅಷ್ಟೇ ಅಲ್ಲದೆ ವಿದೇಶದಲ್ಲೂ ಹೆಚ್ಚು ಜನಪ್ರಿಯವಾಗಿದೆ.
ಹಣದ ಮಳೆಯನ್ನೇ ಸುರಿಸುವ ಐಪಿಎಲ್‍ನ ಟೂರ್ನಿ 12 ಆವೃತ್ತಿಗಳು ಕಳೆದಿವೆ. ಎಂ.ಎಸ್. ಧೋನಿ, ರೋಹಿತ್ ಶರ್ಮಾ ಮತ್ತು ಗೌತಮ್ ಗಂಭೀರ್ ಐಪಿಎಲ್ ನಾಯಕರಾಗಿ ಸಾಕಷ್ಟು ಯಶಸ್ಸನ್ನು ಕಂಡಿದ್ದಾರೆ. ಎಂಎಸ್‍ಡಿ ಐಪಿಎಲ್‍ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರೈಸಿಂಗ್ ಪುಣೆ ಸೂಪರ್‍ಜೈಂಟ್ ತಂಡದ ನಾಯಕರಾಗಿ ಆಡಿದ್ದಾರೆ. ಆದರೆ ಐಪಿಎಲ್ ಇತಿಹಾಸದಲ್ಲಿ ಹೆಚ್ಚಿನ ಸೋಲು ಅನುಭವಿಸಿದ ಪಟ್ಟಿಯಲ್ಲಿ ಧೋನಿ ಅಗ್ರಸ್ಥಾನದಲ್ಲಿದ್ದಾರೆ.
Advertisement
Advertisement
ಐಪಿಎಲ್‍ನಲ್ಲಿ 100ಕ್ಕೂ ಹೆಚ್ಚು ಪಂದ್ಯಗಳಲ್ಲಿ ಗೆಲುವು ದಾಖಲಿಸಿದ ನಾಯಕ ಎಂಬ ಹೆಗ್ಗಳಿಕೆ ಎಂ.ಎಸ್.ಧೋನಿ ಅವರಿಗೆ ಇದೆ. ಅತಿ ಹೆಚ್ಚು 69 ಪಂದ್ಯಗಳಲ್ಲಿ ಸೋಲಿನ ರುಚಿ ನೋಡಿದ ಕೆಟ್ಟ ದಾಖಲೆ ಕೂಡ ಅವರ ಹೆಸರಿನಲ್ಲಿದೆ. ಈ ಪಟ್ಟಿಯ ಎರಡನೇ ಸ್ಥಾನದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಇದ್ದಾರೆ. ಅವರ ನಾಯಕತ್ವದ ತಂಡವು 57 ಬಾರಿ ಸೋಲು ಕಂಡಿದೆ. ಟೀಂ ಇಂಡಿಯಾ ನಾಯಕ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಅವರ ಖಾತೆಯಲ್ಲಿ 55 ಸೋಲುಗಳು ಸೇರಿಕೊಂಡಿವೆ.
Advertisement
Advertisement
ಯಾರಿಗೆ ಎಷ್ಟು ಸೋಲು?:
ಎಂ.ಎಸ್.ಧೋನಿ – 69
ಗೌತಮ್ ಗಂಭೀರ್- 57
ವಿರಾಟ್ ಕೊಹ್ಲಿ- 55
ರೋಹಿತ್ ಶರ್ಮಾ- 42
ಆಡಮ್ ಗಿಲ್‍ಕ್ರಿಸ್ಟ್- 39
ಐಪಿಎಲ್‍ನಲ್ಲಿ ನಾಯಕ ಹೆಚ್ಚು ಪಂದ್ಯಗಳನ್ನು ಆಡಿದ ಪಟ್ಟಿಯಲ್ಲಿ ಎಂ.ಎಸ್.ಧೋನಿ ಅಗ್ರಸ್ಥಾನದಲ್ಲಿದ್ದಾರೆ. ಅವರು 179 ಪಂದ್ಯಗಳಲ್ಲಿ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಗೌತಮ್ ಗಂಭೀರ್ 134 ಪಂದ್ಯಗಳಲ್ಲಿ ಕ್ಯಾಪ್ಟನ್ ಆಗಿದ್ದರು.
ಐಪಿಎಲ್‍ನಲ್ಲಿ ಯಶಸ್ವಿ ನಾಯಕರ ಪಟ್ಟಿಯಲ್ಲಿ ಧೋನಿ ಕೂಡ ಒಬ್ಬರಾಗಿದ್ದಾರೆ. ಅವರು ಮೂರು ಬಾರಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‍ಕೆ)ಗೆ ಪ್ರಶಸ್ತಿಯನ್ನು ಗೆದ್ದುಕೊಟ್ಟಿದ್ದಾರೆ. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ನಾಲ್ಕು ಬಾರಿ ಚಾಂಪಿಯನ್ ಆಗಿದೆ.