ಚಂಡೀಗಢ: ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿಲ್ಲ, ಸುಳ್ಳು ದೂರುಗಳು ಹೆಚ್ಚುತ್ತಿವೆ ಎಂದು ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.
ಪಂಚಕುಲ ಜಿಲ್ಲೆಯ ಕಾಲ್ಕಾ ಪಟ್ಟಣದಲ್ಲಿ ಶುಕ್ರವಾರದಂದು ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮನೋಹರ್ ಲಾಲ್ ಖಟ್ಟರ್ ಭಾಷಣದಲ್ಲಿ, ಹೆಚ್ಚಿನ ಸಂಖ್ಯೆಯ ಅತ್ಯಾಚಾರ ಪ್ರಕರಣಗಳನ್ನು ಮಹಿಳೆಯರು ಪರಿಚಿತರ ವಿರುದ್ಧ ದಾಖಲಿಸುತ್ತಾರೆ. ಅದರಲ್ಲೂ ಸುಳ್ಳು ಆರೋಪಗಳೇ ಹೆಚ್ಚಾಗಿರುತ್ತದೆ. ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿಲ್ಲ. ಆದರೇ ಹಿಂದೆ ಎಂದೋ ನಡೆದ ಘಟನೆಗಳು ಹಾಗೂ ಇಂದು ನಡೆಯುತ್ತಿರುವ ಘಟನೆಗಳನ್ನು ಮುಂದಿಟ್ಟುಕೊಂಡು ಬೇಕಂತಲೇ ಸುಳ್ಳು ಅತ್ಯಾಚಾರ ಕೇಸ್‍ಗಳನ್ನು ಕೆಲವರು ದಾಖಲಿಸುತ್ತಾರೆ. ಆದ್ದರಿಂದ ಇಂತಹ ಘಟನೆಗಳಿಗೆ ಸಂಬಂಧಪಟ್ಟ ದೂರುಗಳು ಹೆಚ್ಚಾಗುತ್ತಿದೆಯೇ ಹೊರತು ಪ್ರಕರಣಗಳಲ್ಲ ಎಂದು ಹೇಳಿಕೆ ನೀಡಿದರು.
ಅತ್ಯಾಚಾರ ದೂರು ದಾಖಲೆಯಾಗುವ ಶೇ.80-90 ರಷ್ಟು ಪ್ರಕರಣಗಳಲ್ಲಿ ಆರೋಪಿ ಹಾಗೂ ದೂರು ನೀಡುವ ಮಹಿಳೆ ಪರಿಚಿತರಾಗಿರುತ್ತಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಆರೋಪಿ ಮತ್ತು ದೂರುದಾರರು ತುಂಬಾ ವರ್ಷಗಳಿಂದ ಜೊತೆಗೆ ಇರುತ್ತಾರೆ. ಆದರೆ ಯಾವುದೋ ವಿಷಯಕ್ಕೆ ಅವರಿಬ್ಬರ ನಡುವೆ ಮನಸ್ತಾಪ ಉಂಟಾಗಿ ಪೊಲೀಸ್ ಠಾಣೆಯಲ್ಲಿ ನನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಮಹಿಳೆ ದೂರು ದಾಖಲಿಸುತ್ತಾರೆ ಎಂದು ಹೇಳಿದರು.
ಸದ್ಯ ಮನೋಹರ್ ಲಾಲ್ ಖಟ್ಟರ್‍ರವರ ಹೇಳಿಕೆಗೆ ಪರ, ವಿರೋಧ ಅಭಿಪ್ರಾಯಗಳು ಕೇಳಿ ಬಂದಿದ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews