ಮುಂಬೈ: ನ್ಯೂಜಿಲೆಂಡ್ (New Zealand) ವಿರುದ್ಧ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಭರ್ಜರಿ ಸಿಕ್ಸರ್ ಬಾರಿಸುವ ಮೂಲಕ ವಿಶ್ವದಾಖಲೆಯೊಂದನ್ನ ನಿರ್ಮಿಸಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲೇ ಅತಿಹೆಚ್ಚು ಸಿಕ್ಸರ್ ಬಾರಿಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.
Most World Cup sixes:
Rohit Sharma – 50*.
Chris Gayle – 49.
– The Hitman has broken the record. pic.twitter.com/RGXS4F0rCt
— Mufaddal Vohra (@mufaddal_vohra) November 15, 2023
Advertisement
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಫೀಲ್ಡಿಂಗ್ ಮಾಡುವ ಅವಕಾಶವನ್ನು ಕಿವೀಸ್‌ಗೆ ಬಿಟ್ಟುಕೊಟ್ಟಿತು. ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಸ್ಫೋಟಕ ಇನ್ನಿಂಗ್ಸ್‌ಗೆ ಮುಂದಾದರು. ಈ ವೇಳೆ ಟ್ರೆಂಟ್ ಬೌಲ್ಟ್ ಅವರ ಓವರ್‌ನಲ್ಲಿ ಪಂದ್ಯದ 3ನೇ ಸಿಕ್ಸರ್ ಸಿಡಿಸುವ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ತಮ್ಮ 50ನೇ ಸಿಕ್ಸರ್ ದಾಖಲಿಸಿದರು. ಇದರೊಂದಿಗೆ ವಿಶ್ವಕಪ್‌ನಲ್ಲಿ 49 ಸಿಕ್ಸರ್ ಸಿಡಿಸಿದ್ದ ಕ್ರಿಸ್‌ಗೇಲ್ (Chris Gayle) ದಾಖಲೆಯನ್ನ ನುಚ್ಚುನೂರು ಮಾಡಿದರು.
Advertisement
Rohit Sharma – the six machine…!!! pic.twitter.com/aMw9pmsjJ8
— Mufaddal Vohra (@mufaddal_vohra) November 15, 2023
Advertisement
ಹಿಟ್‌ಮ್ಯಾನ್ ನಂ.1: ವಿಶ್ವಕಪ್ ಟೂರ್ನಿಯಲ್ಲಿ 49 ಸಿಕ್ಸರ್ ಸಿಡಿಸಿದ್ದ ಕ್ರಿಸ್‌ಗೇಲ್ 2ನೇ ಸ್ಥಾನದಲ್ಲಿದ್ದರೆ, 43 ಸಿಕ್ಸರ್ ಬಾರಿಸಿದ್ದ ಗ್ಲೇನ್ ಮ್ಯಾಕ್ಸ್‌ವೆಲ್ 3ನೇ ಸ್ಥಾನ, ತಲಾ 37 ಸಿಕ್ಸರ್ ಬಾರಿಸಿದ್ದ ಎಬಿಡಿ ವಿಲಿಯರ್ಸ್ ಮತ್ತು ಡೇವಿಡ್ ವಾರ್ನರ್ ಕ್ರಮವಾಗಿ 4 ಮತ್ತು 5ನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಒಟ್ಟು 4 ಸಿಕ್ಸರ್ ಬಾರಿಸಿರುವ ರೋಹಿತ್ ಶರ್ಮಾ ಒಟ್ಟು 51 ಸಿಕ್ಸರ್‌ಗಳೊಂದಿಗೆ ನಂ.1 ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: World Cup: ಈ ದಾಖಲೆ ಬರೆದ ಭಾರತದ ಮೊದಲ ಕ್ಯಾಪ್ಟನ್ ರೋಹಿತ್ ಶರ್ಮಾ
Advertisement
ಸ್ಫೋಟಕ ಬ್ಯಾಟಿಂಗ್‌ಗೆ ಮುಂದಾಗಿದ್ದ ರೋಹಿತ್ ಶರ್ಮಾ ಒಟ್ಟು 29 ಎಸೆತ ಎದುರಿಸಿ ತಲಾ 4 ಸಿಕ್ಸರ್ ಮತ್ತು ಬೌಂಡರಿ ಬಾರಿಸಿ 47 ರನ್ಗೆ ವಿಕೆಟ್ ಒಪ್ಪಿಸಿದರು. ಮತ್ತೊಂದು ಸಿಕ್ಸರ್ ಬಾರಿಸುವ ಪ್ರಯತ್ನದಲ್ಲಿ ಲಾಂಗ್ ಆನ್ನಲ್ಲಿ ನಾಯಕ ಕೇನ್ ವಿಲಿಯಮ್ಸನ್ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ಕೇವಲ 3 ರನ್ ಅಂತರದಿಂದ ಅರ್ಧಶತಕ ವಂಚಿತರಾದರು. ಇದನ್ನೂ ಓದಿ: World Cup 2023: ಹಿಟ್‌ಮ್ಯಾನ್ ಸಿಕ್ಸರ್ ಹೊಡೆತಕ್ಕೆ ಲೆಜೆಂಡ್ ABD ದಾಖಲೆ ಪುಡಿಪುಡಿ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಅವರು ಕ್ಯಾಲೆಂಡರ್ ವರ್ಷವೊಂದರಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದ ದಾಖಲೆ ಬರೆದಿದ್ದರು. ಈ ಮೂಲಕ ಎಬಿಡಿ ದಾಖಲೆ ಮುರಿದ್ದರು. ಅದೇ ಪಂದ್ಯದಲ್ಲಿ ಆರಂಭಿಕನಾಗಿಯೇ 14 ಸಾವಿರ ಅಂತಾರಾಷ್ಟ್ರೀಯ ರನ್ ಪೂರೈಸಿದ ಸಾಧನೆಯನ್ನೂ ಮಾಡಿದ್ದರು. ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ 18,000 ಅಂತಾರಾಷ್ಟ್ರೀಯ ರನ್ ಪೂರೈಸಿದ ದಾಖಲೆ ಬರೆದಿದ್ದರು. ಇದನ್ನೂ ಓದಿ: World Cup 2023: ಭಾರತಕ್ಕೆ ಗೆಲುವಿನ ʻಶ್ರೇಯಸ್ಸುʼ – ಡಚ್ಚರ ವಿರುದ್ಧ 160 ರನ್‌ಗಳ ಭರ್ಜರಿ ಜಯ..!