ಕಲಬುರಗಿ: ತಾಯಿ ಮತ್ತು ಮಗಳು ಜಿಲ್ಲೆಯ ಶಹಾಬಾದ್ ಬಳಿಯ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ (Kalaburagi) ಜಿಲ್ಲೆಯಲ್ಲಿ ನಡೆದಿದೆ.
ತಾಯಿ ಸುಮಲತಾ (45), ಹಾಗೂ ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳಾಗಿದ್ದಾರೆ. ಇದನ್ನೂ ಓದಿ: ಪರೀಕ್ಷೆ ವೇಳೆ ಲೋಡ್ ಶೆಡ್ಡಿಂಗ್ – ಸೋಲಾರ್ ಬೀದಿ ದೀಪದ ಕೆಳಗೆ ಓದುತ್ತಿದ್ದಾರೆ ವಿದ್ಯಾರ್ಥಿನಿಯರು
ಇವರಿಬ್ಬರು ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ರಾತ್ರಿ ಕಾಗಿಣಾ ನದಿಗೆ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ-ಮಗಳು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.