ಬೆಂಗಳೂರು: ಬೆಸ್ಕಾಂ (BESCOM) ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ವೈಟ್ ಫೀಲ್ಡ್‌ನ (Whitefield) ಕಾಡುಗೋಡಿಯಲ್ಲಿ (Kadugodi) ನಡೆದಿದೆ.
ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಸಾವನ್ನಪ್ಪಿದ ದುರ್ದೈವಿಗಳು. ತಮಿಳುನಾಡು ಮೂಲದ ಇವರು ಕಾಡುಗೋಡಿಯ ಗೋಪಾಲ್ ಕಾಲೋನಿಯಲ್ಲಿ ವಾಸವಾಗಿದ್ದರು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ಅದನ್ನು ತುಳಿದ ಕಾರಣ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸಾಂಬಾರ್ ಪಾತ್ರೆಗೆ ಬಿದ್ದು 2ನೇ ಕ್ಲಾಸ್ ವಿದ್ಯಾರ್ಥಿನಿ ದಾರುಣ ಸಾವು
Advertisement
Advertisement
ದೀಪಾವಳಿ ಹಬ್ಬಕ್ಕೆ ಚೆನ್ನೈಗೆ ಹೋಗಿದ್ದ ಸೌಂದರ್ಯ, ಪತಿ ಸಂತೋಷ್ ಹಾಗೂ 9 ತಿಂಗಳ ಕಂದಮ್ಮ ಲಿಯಾ ಇಂದು ಮುಂಜಾನೆ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ದಾರಿಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ಅದನ್ನು ಸೌಂದರ್ಯ ತುಳಿದಿದ್ದರು. ಈ ವೇಳೆ ಪತಿ ಸಂತೋಷ್ ಕೈಗೆ ವಿದ್ಯುತ್ ಶಾಕ್ ಹೊಡೆದು ಅದೃಷ್ಟವಶಾತ್ ಅವರು ಪಕ್ಕಕ್ಕೆ ಬಿದ್ದಿದ್ದರು. ಆದರೆ ಪತಿ ಎದುರೇ ಪತ್ನಿ ಹಾಗೂ ಕಂದಮ್ಮ ವಿದ್ಯುತ್ ಶಾಕ್‌ಗೆ ಸುಟ್ಟು ಕರಕಲಾಗಿದ್ದಾರೆ.
Advertisement
ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಎಇ ಚೇತನ್, ಎಇಇ ಸುಬ್ರಮಣಿ ಹಾಗೂ ಇಇ ಶ್ರೀ ರಾಮನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕುಟುಂಬ ಬಲಿಪಡೆದು ದೀಪಾವಳಿ ಆಚರಿಸಿದ ಆರೋಪಿ ಪ್ರವೀಣ್