ಲಕ್ನೋ: ಒತ್ತುವರಿ ತೆರವು ಕಾರ್ಯದ (Anti Encroachment) ವೇಳೆ ಬೆಂಕಿ (Fire) ಹೊತ್ತಿಕೊಂಡು, ತಾಯಿ ಹಾಗೂ ಮಗಳು (Mother and Daughter) ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ (Uttar Pradesh) ಕಾನ್ಪುರ ದೇಹತ್ ಜಿಲ್ಲೆಯ ಗ್ರಾಮವೊಂದರಲ್ಲಿ ಸೋಮವಾರ ನಡೆದಿದೆ.
ವರದಿಗಳ ಪ್ರಕಾರ, ಒತ್ತುವರಿ ತೆರವು ಕಾರ್ಯದ ವೇಳೆ 45 ವರ್ಷದ ಮಹಿಳೆ ಹಾಗೂ ಆಕೆಯ 20 ವರ್ಷದ ಮಗಳು ಬೆಂಕಿ ಹಚ್ಚಿಕೊಂಡಿದ್ದರು ಎಂದು ಹೇಳಲಾಗಿದೆ. ಆದರೆ ತಾಯಿ ಹಾಗೂ ಮಗಳು ಮನೆಯ ಒಳಗಿದ್ದಾಗಲೇ ಅವರ ಗುಡಿಸಲಿಗೆ ಪೊಲೀಸರು ಬೆಂಕಿ ಹಚ್ಚಿದ್ದಾರೆ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ.
Advertisement
Advertisement
ಘಟನೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು 13 ಜನರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದರಲ್ಲಿ ಸ್ಟೇಷನ್ ಹೌಸ್ ಆಫೀಸರ್ ಹಾಗೂ ಬುಲ್ಡೋಜರ್‌ನ ಚಾಲಕನೂ ಸೇರಿದ್ದಾರೆ.
Advertisement
ಘಟನೆಯೇನು?: ಜಿಲ್ಲೆಯ ರೂರಾ ಪ್ರದೇಶದ ಮದೌಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರು, ಜಿಲ್ಲಾಡಳಿತ ಹಾಗೂ ಕಂದಾಯ ಅಧಿಕಾರಿಗಳು ಸರ್ಕಾರಿ ಜಮೀನಿನ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲು ಮುಂದಾದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಅಧಿಕಾರಿಗಳು ಬೆಳಗ್ಗೆ ಬುಲ್ಡೋಜರ್‌ನೊಂದಿಗೆ ಸ್ಥಳಕ್ಕೆ ತೆರಳಿದ್ದು, ಈ ಬಗ್ಗೆ ಯಾವುದೇ ಸೂಚನೆಯನ್ನು ನೀಡಲಾಗಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಜನರು ತಮ್ಮ ಗುಡಿಸಲಿನಲ್ಲಿ ಇದ್ದಾಗಲೇ ಅಧಿಕಾರಿಗಳು ಬೆಂಕಿ ಹಚ್ಚಿದ್ದಾರೆ. ಹಾಗೂ ದೇವಾಲಯಗಳನ್ನು ಒಡೆದಿದ್ದಾರೆ. ಎಲ್ಲರೂ ಅಲ್ಲಿಂದ ಪ್ರಾಣವನ್ನು ಕಾಪಾಡಲು ಓಡಿದ್ದಾರೆ. ಆದರೆ ತಾಯಿ ಹಾಗೂ ಮಗಳನ್ನು ಕಾಪಾಡಲು ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್ ಶಾ
ಮಹಿಳೆ ಪ್ರಮಿಳ ದೀಕ್ಷಿತ್ ಹಾಗೂ ಅವರ ಮಗಳು ನೇಹಾ ಒತ್ತುವರಿ ತೆರವು ಕಾರ್ಯದ ವೇಳೆ ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆದರೆ ಈ ಸಾವು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಾಯಿ ಮಗಳ ಸಾವಿನ ಬಳಿಕ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ.
ವಿಷಯ ಬೆಳಕಿಗೆ ಬರುತ್ತಲೇ ಕಾನ್ಪುರ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಸಿಂಗ್, ವಿಭಾಗೀಯ ಆಯುಕ್ತ ರಾಜ್ ಶೇಖರ್ ತಮ್ಮ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ನೀಡಿದ್ದು, ಸ್ಥಳೀಯರನ್ನು ಸಮಾಧಾನಪಡಿಸಲು ಯತ್ನಿಸಿದ್ದಾರೆ. ತನಿಖೆಗೆ ಆದೇಶಿಸಲಾಗಿದ್ದು, ಘಟನೆಯಲ್ಲಿ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಘಟನೆ, ನಾವು ಸಂತ್ರಸ್ತ ಕುಟುಂಬದೊಂದಿಗೆ ಇದ್ದೇವೆ, ಘಟನೆಯ ಹೊಣೆಗಾರರನ್ನು ಬಿಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k