CrimeDistrictsKalaburagiKarnatakaLatestMain Post

ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ- ಸಾವು-ಬದುಕಿನ ನಡುವೆ ಮಗ ಹೋರಾಟ

ಕಲಬುರಗಿ: ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಬಳಿಕ ತಾಯಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ನಗರದ ಪಂಚಶೀಲ ನಗರದಲ್ಲಿ ನಡೆದಿದೆ.

ಮೃತರನ್ನು ತಾಯಿ ದೀಕ್ಷಾ (26) ಹಾಗೂ ಮಗಳು ಸಿಂಚನ (2) ಎಂದು ಗುರುತಿಸಲಾಗಿದೆ. ಇನ್ನು 3 ವರ್ಷದ ಮಗ ಧನಂಜಯ್ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ. ಇದನ್ನೂ ಓದಿ: 5 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ವಶ – ಇಬ್ಬರ ಬಂಧನ

ದೀಕ್ಷಾ ಮೊದಲಿಗೆ ಇನ್ನಿಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಮಕ್ಕಳು ತಪ್ಪಿಸಿಕೊಳ್ಳಲು ಮುಂದಾದಾಗ ಆಟಿಕೆ ವಸ್ತುಗಳಿಗೆ ಕಟ್ಟಿ ಹಾಕಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ತಾಯಿ-ಮಗಳು ಮೃತಪಟ್ಟರೆ, ಮಗ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

ಗಂಡ, ಅತ್ತೆ ಹಾಗೂ ಮಾವನ ಕಿರುಕುಳದಿಂದ ಬೇಸತ್ತು ದೀಕ್ಷಾ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Back to top button