ರಾಮನಗರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ (Mother), ಮಗ (Son) ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ (Ramanagara) ಕುಮಾರಸ್ವಾಮಿ ಲೇಔಟ್ನಲ್ಲಿ ನಡೆದಿದೆ.
ಮೃತರನ್ನು ವಿಜಯಲಕ್ಷ್ಮಿ (50) ಹಾಗೂ ಹರ್ಷ (25) ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮಿ ಜೊತೆ ಊಟದ ವಿಚಾರಕ್ಕೆ ಮಗ ಹರ್ಷ ರಾತ್ರಿ ಜಗಳವಾಡಿದ್ದ. ಮಗನ ಮಾತಿನಿಂದ ಮನನೊಂದ ವಿಜಯಲಕ್ಷ್ಮಿ ಮನೆಯ ಬಳಿ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇದನ್ನೂ ಓದಿ: ಗುಜರಾತ್ ಪ್ರವಾಸ ಮುಗಿಸಿ ಆರಗ ವಾಪಸ್ ಆಗ್ತಿದ್ದಂತೆ ಸ್ಯಾಂಟ್ರೋ ರವಿ ಅರೆಸ್ಟ್- ರಾಜ್ಯ ರಾಜಕೀಯದಲ್ಲಿ ಸಂಚಲನ
Advertisement
Advertisement
ಬಳಿಕ ವಿಜಯಲಕ್ಷ್ಮಿ ಅವರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ತಾಯಿ ಮೃತಪಟ್ಟ ವಿಚಾರ ತಿಳಿದು ತೀವ್ರವಾಗಿ ಮನನೊಂದ ಹರ್ಷ ನಾನೇ ತಾಯಿಯ ಸಾವಿಗೆ ಕಾರಣನಾದೆ ಎಂದು ಭಾವಿಸಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಸಂಬಂಧಿಸಿ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯಪಾಲರನ್ನು ಗುಂಡಿಕ್ಕಿ ಕೊಲ್ಲಲು ಉಗ್ರನನ್ನು ಕಳುಹಿಸುತ್ತೇವೆ: ಡಿಎಂಕೆ ನಾಯಕ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k