ಚಿತ್ರದುರ್ಗ: ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ತಾಯಿ-ಮಗ ಇಬ್ಬರೂ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿರುವ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಮೊಳಕಾಲ್ಮೂರು (Molakalmuru) ತಾಲೂಕಿನ ತುಮಕೂರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬೋರಮ್ಮ (25) ಮತ್ತು ಪ್ರಣೀತ್ ಗೌಡ @ಅಜಯ್ (03) ಮೃತ ದುರ್ದೈವಿಯಾಗಿದ್ದಾರೆ. ಮನೆಯಿಂದ ಶೌಚಾಲಯಕ್ಕೆ ಎಳೆದಿರುವ ವಿದ್ಯುತ್ ವೈಯರ್ ಡ್ಯಾಮೇಜ್ ಆಗಿದ್ದು, ಅದನ್ನು ಆಕಸ್ಮಿಕವಾಗಿ ಹಿಡಿದುಕೊಂಡ ಪ್ರಣೀತ್ ಗೌಡಗೆ ಕರೆಂಟ್ ಶಾಕ್ ಹೊಡಿದಿದೆ. ಆಗ ಮಗನನ್ನು ರಕ್ಷಿಸಲು ಮುಂದಾದ ಮಗುವಿನ ತಾಯಿ ಬೋರಮ್ಮಗೂ ಸಹ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೋರಮ್ಮನ ಎದೆ ಮತ್ತು ಕೈಭಾಗದಲ್ಲಿ ಸುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಮೋದಿಗೆ ಭವ್ಯ ಸ್ವಾಗತ – ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ಭಾಗಿ
ಇನ್ನು ಏಕಾಕಾಲದಲ್ಲಿ ತಾಯಿ ಮತ್ತು ಮಗುವಿನ ಶವ ನೋಡಿದ ಕುಟುಂಬಸ್ಥರಿಗೆ ಬರಸಿಡಿಲು ಬಡಿದಂತಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಾಜಣ್ಣ ಮತ್ತು ಮೊಳಕಾಲ್ಮೂರು ಪೊಲೀಸ್ ಠಾಣೆಯ ಪಿಎಸ್‌ಐ ಪಾಂಡುರಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಕೊಪ್ಪಳದಲ್ಲೊಂದು ಅಂತಾರಾಷ್ಟ್ರೀಯ ಮದುವೆ – ಲಂಡನ್ ಯುವತಿಗೆ ಗಂಗಾವತಿ ಗಂಡ!
ಇನ್ನು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿಲಾಗಿದೆ. ಈ ಸಂಬಂಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಬಿರಿಪೋರ್ಟ್‌ಗೆ ಇಡಿ ಆಕ್ಷೇಪ – ಏಪ್ರಿಲ್ 8ಕ್ಕೆ ವಿಚಾರಣೆ ಮುಂದೂಡಿಕೆ