ಚಿಕ್ಕೋಡಿ/ಬೆಳಗಾವಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಡೆದಿದೆ.
ಸಲ್ಮಾ ಹನೀಪ್ ರಮಜಾನ್ (32) ಆತ್ಮಹತ್ಯೆಗೆ ಶರಣಾದ ಮಹಿಳೆ. ಮನೆಯಲ್ಲಿ ಮಕ್ಕಳು ಮತ್ತು ಪತಿಯ ತಾಯಿ ಮಲಗಿದ್ದಾಗ ಕೆಳಗಡೆ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Advertisement
ಸಲ್ಮಾ ಹನೀಪ್ ರಮಜಾನ್ ಅವರಿಗೆ 18 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಮೂರು ವರ್ಷಗಳ ಹಿಂದೆ ಪತಿ ಮೃತಪಟ್ಟಿದ್ದಾರೆ. ಅಂದಿನಿಂದ ರಮಜಾನ್ ಖಿನ್ನತೆಗೆ ಒಳಗಾಗಿ ಮಾನಸಿಕವಾಗಿ ನೊಂದಿದ್ದರು ಎಂದು ಸ್ಥಳೀಯರು ಹೇಳುತ್ತಿದ್ದಾರೆ.
Advertisement
ಸಲ್ಮಾ ಇಬ್ಬರು ಮಕ್ಕಳು ಮತ್ತು ಪತಿಯ ತಾಯಿ ಜೊತೆ ವಾಸವಾಗಿದ್ದರು. ಆದರೆ ಶನಿವಾರ ರಾತ್ರಿ ಮನೆಯ ಮೇಲಿನ ರೂಮಿನಲ್ಲಿ ಎಲ್ಲರೂ ಮಲಗಿದ್ದ ವೇಳೆ ಕೆಳಗಡೆ ಇರುವ ಹಾಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಕ್ಕಳು ಮತ್ತು ಅತ್ತೆ ಬೆಳಗ್ಗೆ ಎದ್ದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.
Advertisement
ಈ ಕುರಿತು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.